ಚಿತ್ರದುರ್ಗ : ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ನೆಪ್ರೋಪ್ಲಸ್ ಸಂಸ್ಥೆಯೊಂದಿಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಹಾಗೂ ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮೂರು, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ನೀಡಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕೆ.ಅವರ ಮೊಬೈಲ್ ಸಂಖ್ಯೆ 7760924885, ಎಂ.ಹೆಚ್.ಶಿವಕುಮಾರ್ ಮೊಬೈಲ್ ಸಂಖ್ಯೆ 9738485783 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.