ಬಳ್ಳಾರಿ : ನೆಹರು ಯುವ ಕೇಂದ್ರ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಮತ್ತು ರಾಷ್ಟಿçÃಯ ಅಂಕಿ ಸಂಖ್ಯೆಗಳ ಇಲಾಖೆ ಇವರ ಸಹಯೋಗದೊಂದಿಗೆ ‘ನನ್ನ ಭಾರತದೊಂದಿಗೆ ದೀಪಾವಳಿ ಕಾರ್ಯಕ್ರಮ’ದಡಿ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಕಚೇರಿ ಆವರಣದಲ್ಲಿ ಬುಧವಾರ ಸ್ವಚ್ಛತಾ ಸೇವೆ ಜಾಥಾ ಕಾರ್ಯಕ್ರಮ ನಡೆಯಿತು.
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ಕಾರ್ಯದರ್ಶಿ ಕೆ.ರ‍್ರಿಗೌಡ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಬಳಿಕ ಮಾತನಾಡಿದ ಅವರು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧಿಕಾರಿ ಎಂ.ನAಜುಡಯ್ಯ ಸ್ವಾಮಿ, ನೆಹರು ಯುವ ಕೇಂದ್ರದ ಜಿಲ್ಲಾ ಯುವ ಅಧಿಕಾರಿ ಮೊಂಟು ಪಾತರ್, ರಾಷ್ಟಿçÃಯ ಅಂಕಿ ಸಂಖ್ಯೆಗಳ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು, ಸ್ವಯಂ ಸೇವಕರು ಭಾಗವಹಿಸಿದ್ದರು.