Breaking
Mon. Dec 23rd, 2024

ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನ ಹಾಗೂ ಆರ್ಥಿಕ ಅನುದಾನಕ್ಕಾಗಿ ಅರ್ಜಿ….!

ಚಿತ್ರದುರ್ಗ : ಭಾರತೀಯ ಸೇನೆಯ ಜೆ.ಸಿ.ಓ ರ್ಯಾಂಕ್‍ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ್ಯಾಂಕ್‍ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿಯಲ್ಲಿ ಶೇ.60 ಪ್ರತಿಶತಕ್ಕಿಂತ ಅಧಿಕ ಅಂಕ ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವವರಿಂದ ಪ್ರಧಾನ ಮಂತ್ರಿ ಶಿಷ್ಯವೇತನ ಯೋಜನೆ ಎಂಬ ಶೀರ್ಷಿಕೆಯಡಿ ಶಿಷ್ಯವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ.

ಅರ್ಹ ಫಲಾನುಭವಿಗಳು ನಿಗದಿತ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ HTTPS://ONLINE.KSB.GOV.IN ವನ್ನು ಅಥವಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರ ದೂರವಾಣಿ ಸಂಖ್ಯೆ 08182-220925 ಯನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

 

 

 

Related Post

Leave a Reply

Your email address will not be published. Required fields are marked *