ಚಿತ್ರದುರ್ಗ ಹಾಗೂ ಚಳ್ಳಕೆರೆ ನಗರಸಭೆ ಮತ್ತು ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.
ಚಿತ್ರದುರ್ಗ ನಗರಸಭೆಯ 15ನೇ ವಾರ್ಡ್-ಹಿಂದುಳಿದ ವರ್ಗ-(ಎ), ಚಳ್ಳಕೆರೆ ನಗರಸಭೆಯ 4ನೇ ವಾರ್ಡ್-ಸಾಮಾನ್ಯ ಹಾಗೂ ನಾಯಕನಹಟ್ಟಿ ಪಟ್ಟಣ ಪಂಚಾಯಿತಿಯ ಜಾಗನೂರುಹಟ್ಟಿಯ 1ನೇ ವಾರ್ಡ್-ಪರಿಶಿಷ್ಟ ಜಾತಿಗೆ ಮೀಸಲಾತಿ ನಿಗಧಿಯಾಗಿದೆ.
2024ರ ನ.4 ಸೋಮವಾರದಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ನ.11 ಸೋಮವಾರ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದೆ. ನ.12 ಮಂಗಳವಾರ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನ.14 ಗುರುವಾರ ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ನ.23 ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.
ಒಂದು ವೇಳೆ ಮರು ಮತದಾನದ ಅವಶ್ಯಕತೆ ಬಿದ್ದಲ್ಲಿ ನ.25 ಸೋಮವಾರ ಮರು ಮತದಾನ ನಡೆಸಲಾಗುವುದು. ನ.26 ಮಂಗಳವಾರ ಸಂಬಂಧಪಟ್ಟ ತಾಲ್ಲೂಕು ಕೇಂದ್ರಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಸಲಾಗುವುದು. ವಿಜೇತ ಅಭ್ಯರ್ಥಿಯ ಘೋಷಣೆ ತರುವಾಯ ಚುನಾವಣೆ ಪ್ರಕ್ರಿಯೆಗಳನ್ನು ಮುಕ್ತಾಯಗೊಳಿಸಲಾಗುವುದು. ನ.04 ರಿಂದ 26 ರವರೆಗೆ ಚುನಾವಣೆ ನಡೆಯುವ ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‍ಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.