ಶಿವಮೊಗ್ಗ : ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ-2015 ಸೆಕ್ಷನ್ 80 ಮತ್ತು 81ರ ಅನ್ವಯ 5 ವರ್ಷಗಳವರೆಗೂ ಸೆರೆಮನೆ ವಾಸದೊಂದಿಗೆ ರೂ.1.00 ಲಕ್ಷಗಳವರೆಗೆ ದಂಡ ವಿಧಿಸಬಹುದು.
ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮೀಲಾದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆ ಮಾಡಲಾಗುವುದು.
ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಕಂಡು ಬಂದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಆಲ್ಕೋಳ, ಶಿವಮೊಗ್ಗ ದೂರವಾಣಿ ಸಂಖ್ಯೆ : 08182-295709ನ್ನು ಸಂಪರ್ಕಿಸುವಂತೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿವಮೊಗ್ಗ ಇವರು ತಿಳಿಸಿರುತ್ತಾರೆ.