Breaking
Mon. Dec 23rd, 2024

ವಿದ್ಯಾಸಿರಿ ಸೌಲಭ್ಯಕ್ಕೆ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ…..;

ಶಿವಮೊಗ್ಗ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024-25ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿಯುಸಿ ಸಮನಾಂತರ ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ ಸೌಲಭ್ಯಕ್ಕಾಗಿ https://ssp.postmartic.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ನವೆಂಬರ್ 10 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ https://bcwd.karnataka.gov.in ವೆಬ್‌ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmartichelp@karnataka.gov.in, bcwdhelpline@gmail.com, , ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸುವುದು.

Related Post

Leave a Reply

Your email address will not be published. Required fields are marked *