ಚಿತ್ರದುರ್ಗದ : 2024-25ನೇ ಸಾಲಿಗೆನ್ಯತೆ, ತಾರ್ಕಿಕ ಸಾಧನೆಗಳು, ಕ್ರೀಡೆ, ಕಲೆ, ಸಾಂಸ್ಕøತಿಕ ಹಾಗೂ ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ 5 ರಿಂದ 18 ವರ್ಷಗಳ ವಯೋಮಿತಿಯ ಮಕ್ಕಳಿಗೆ ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ ಒಟ್ಟು 8 ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಈ ಸಂಬಂಧ ಅರ್ಜಿಯನ್ನು ಆಹ್ವಾನಿಸಲಾಗಿದೆ. ನ.20 ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.
ಅರ್ಜಿ ಸಲ್ಲಿಸಲು 5-18 ವರ್ಷ ವಯೋಮಿತಿ ಹೊಂದಿರಬೇಕು (ಜುಲೈ 31ರಂತೆ), ನಾವೀನ್ಯತೆ, ತಾರ್ಕಿಕ ಸಾಧನೆ, ಕ್ರೀಡೆ ಮತ್ತು ಕಲೆ, ಸಾಂಸ್ಕøತಿಕ, ಸಂಗೀತ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರತಿಭೆ ಹೊಂದಿರಬೇಕು. ವಯಸ್ಸಿನ ಬಗ್ಗೆ ಜನನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿದ ಪ್ರತಿ ಲಗತ್ತಿಸಬೇಕು. ಪ್ರತಿಭೆಯನ್ನು ಹೊಂದಿರುವ ಪ್ರಮುಖ ದಿನಪತ್ರಿಕೆಯಲ್ಲಿ ಪ್ರಕಟಗೊಂಡಿರುವ ಪತ್ರಿಕೆ ತುಣುಕು ಅಥವಾ ಪ್ರಮಾಣ ಪತ್ರ ಹಾಗೂ ಅಂತರಾಷ್ಟ್ರೀಯ, ರಾಷ್ಟ್ರೀಯ, ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದಿರುವ ಪ್ರಮಾಣ ಪತ್ರಗಳನ್ನು ಲಗತ್ತಿಸಬೇಕು. ಹಿಂದಿನ ಅವಧಿಯಲ್ಲಿ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದ ಮಕ್ಕಳಿಗೆ ಪ್ರಶಸ್ತಿ ನೀಡಲು ಅವಕಾಶವಿಲ್ಲ. ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ನೆಲೆಸಿರಬೇಕು. ಈ ಬಗ್ಗೆ ಸ್ವಯಂ ದೃಢೀಕರಣ. ಸಾಧಿಸಿರುವ ಪ್ರತಿಭೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಸಲ್ಲಿಸಬೇಕು. ಜಿಲ್ಲಾ ಪಂಚಾಯಿತಿ ಸಿಇಒ ನೇತೃತ್ವದ ಸಮಿತಿಯಲ್ಲಿ ಪ್ರಶಸ್ತಿಗಾಗಿ ಆಯ್ಕೆ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಬಾಲ ಭವನ ಆವರಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ .