Breaking
Mon. Dec 23rd, 2024

ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ವಿಜೃಂಭಣೆಯ ಒನಕೆ ಓಬವ್ವ ಜಯಂತಿ ಆಚರಣೆ….!

ಚಿತ್ರದುರ್ಗ : ಜಿಲ್ಲಾಡಳಿತದ ವತಿಯಿಂದ ಇದೇ ನವೆಂಬರ್ 11 ರಂದು ಜಿಲ್ಲಾ ಕೇಂದ್ರದಲ್ಲಿ ವೀರ ವನಿತೆ ಒನಕೆ ಓಬವ್ವ ಜಯಂತಿಯನ್ನು ವಿಜೃಂಭಣೆಯಿಂದ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಒನಕೆ ಓಬವ್ವ ಜಯಂತಿ ಆಚರಿಸುವ ಸಂಬಂಧ ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳುವ ಬಗ್ಗೆ ಚರ್ಚಿಸಲು ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವೀರ ವನಿತೆ ಒನಕೆ ಓಬವ್ವ ಜಯಂತಿ ಅಂಗವಾಗಿ ನವೆಂಬರ್ 11 ರಂದು ಬೆಳಿಗ್ಗೆ 9ಕ್ಕೆ ನಗರದ ಹೊಳಲ್ಕೆರೆ ರಸ್ತೆಯ ಗೌರಸಮುದ್ರ ಮಾರಮ್ಮ ದೇಗುಲದ ಸಮೀಪದಿಂದ ಒನಕೆ ಓಬವ್ವ ಭಾವಚಿತ್ರದ ಮೆರವಣಿಗೆಯು ಪ್ರಾರಂಭವಾಗಿ ಸಂಗೋಳ್ಳಿ ರಾಯಣ್ಣ ವೃತ್ತ, ಗಾಂಧಿವೃತ್ತ, ಪ್ರವಾಸಿ ಮಂದಿರ ಮಾರ್ಗವಾಗಿ ಒನಕೆ ಓಬವ್ವ ವೃತ್ತ, ಮದಕರಿ ನಾಯಕ ವೃತ್ತದ ಮೂಲಕ ತರಾಸು ರಂಗಮಂದಿರ ತಲುಪಲಿದೆ. ಮೆರವಣಿಗೆಯಲ್ಲಿ ಜಾನಪದ ಕಲಾತಂಡಗಳು ಭಾಗವಹಿಸಲಿವೆ. ಬೆಳಿಗ್ಗೆ 11ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಎಲ್ಲ ಸಮಾಜದವರು ಪಾಲ್ಗೊಳ್ಳಬೇಕು ಎಂದರು.

ಸರ್ಕಾರದ ಶಿಷ್ಟಾಚಾರದ ಅನುಸಾರ ಆಹ್ವಾನ ಪತ್ರಿಕೆ ಮುದ್ರಿಸಿ, ಜನಪ್ರತಿನಿಧಿಗಳನ್ನು ಜಯಂತಿಗೆ ಆಹ್ವಾನಿಸಲಾಗುವುದು. ಒನಕೆ ಓಬವ್ವ ಅವರ ಕುರಿತು ಸಂಪನ್ಮೂಲ ವ್ಯಕ್ತಿ ಡಾ.ತಿಪ್ಪೇಸ್ವಾಮಿ ಮತ್ಸಮುದ್ರ ಅವರಿಂದ ವಿಶೇಷ ಉಪನ್ಯಾಸ ಹಾಗೂ ಕಲಾವಿದರಿಂದ ಗೀತಗಾಯನ ಕಾರ್ಯಕ್ರಮ ಆಯೋಜಿಲಾಗುವುದು. ಜಯಂತಿ ಅಂಗವಾಗಿ ನಗರದ ಪ್ರಮುಖ ವೃತ್ತಗಳಿಗೆ ಅಲಂಕಾರ ಮಾಡಬೇಕು. ಒಂದು ದಿನ ಮುಂಚಿತವಾಗಿ ಒನಕೆ ಓಬವ್ವ ಪ್ರತಿಮೆಗೆ ವಿದ್ಯುತ್ ಅಲಂಕಾರ ಹಾಗೂ ಪುಷ್ಪಾಲಂಕಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮಾಜದ ಮುಖಂಡ ಹೆಚ್.ಸಿ. ನಿರಂಜನಮೂರ್ತಿ ಮಾತನಾಡಿ, ಎಸ್‍ಎಸ್‍ಎಲ್‍ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಜಯಂತಿ ಕಾರ್ಯಕ್ರಮದಲ್ಲಿ ಸಮಾಜದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ, ಗೌರವಿಸಲಾಗುವುದು ಎಂದು ಹೇಳಿದರು.

ಚಿತ್ರದುರ್ಗ ಸರ್ಕಾರಿ ವೈದ್ಯಕೀಯ ಕಾಲೇಜಿಗೆ ವೀರ ವನಿತೆ ಒನಕೆ ಓಬವ್ವ ಹೆಸರು ನಾಮಕರಣ ಮಾಡುವಂತೆ ರಾಜ್ಯ ಸಭಾ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ಮನವಿ ಮಾಡಿದರು.

ಸಭೆಯಲ್ಲಿ ಛಲವಾದಿ ಮಹಾಸಂಸ್ಥಾನ ಗುರಪೀಠ ಟ್ರಸ್ಟ್‍ನ ಬಸವ ನಾಗಿದೇವ ಸ್ವಾಮೀಜಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ, ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ, ನಗರಸಭೆ ಪೌರಾಯುಕ್ತೆ ಎಂ.ರೇಣುಕಾ, ಛಲವಾದಿ ಸಮಾಜದ ಮುಖಂಡರಾದ ಹೆಚ್.ಸಿ. ನಿರಂಜನಮೂರ್ತಿ, ಶೇಷಣ್ಣ, ಎಸ್.ವಿ.ಗುರುಮೂರ್ತಿ, ಎನ್.ಬಿ. ಭಾರ್ಗವಿ ದ್ರಾವಿಡ್, ಎಸ್.ಎನ್. ರವಿಕುಮಾರ್, ತಿಪ್ಪೇಸ್ವಾಮಿ, ನವೀನ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಮಾಜದ ಮುಖಂಡರು ಇದ್ದರು.

 

Related Post

Leave a Reply

Your email address will not be published. Required fields are marked *