Breaking
Mon. Dec 23rd, 2024

ಅಂತರಾಷ್ಟ್ರೀಯ ದತ್ತು ಮಾಸಾಚರಣೆಯನ್ನಾಗಿ ಆಚರಣೆ….!

ಚಿತ್ರದುರ್ಗ : ಪ್ರತಿ ವರ್ಷದಂತೆ ಈ ವರ್ಷವೂ ಸಹ 2024ನೇ ವರ್ಷದ ನವೆಂಬರ್ ತಿಂಗಳಿನಲ್ಲಿ ಅಂತರಾಷ್ಟ್ರೀಯ ದತ್ತು ಮಾಸಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.

ಮಗು ಪ್ರತಿವೂ ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಪ್ರತಿಯೊಬ್ಬ ಮಗುವಿನ ಹಕ್ಕು. ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಕುಟುಂಬದ ವಾತಾವರಣವು ಕಲ್ಪಿಸುತ್ತದೆ. ಈ ಆಧುನಿಕ ಪ್ರಕ್ರಿಯೆಯು ಅನಾಥ, ಪರಿತ್ಯಕ್ತ ಹಾಗೂ ಒಪ್ಪಿಸಲ್ಪಟ್ಟ ಮಕ್ಕಳ ಪುನರ್ವಸತಿಗೆ ನೆರವಾಗುವುದು ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಯ ಉದ್ದೇಶವಾಗಿದೆ.

ಅಂತರಾಷ್ಟ್ರೀಯ ದತ್ತು ಮಾಸಾಚರಣೆ ನವೆಂಬರ್-2024ರ ಅಂಗವಾಗಿ ಪೋಷಕತ್ವ ಯೋಜನೆ, ಕಾನೂನು ಬದ್ಧ ದತ್ತು ಹಾಗೂ ಕಾನೂನು ಬಾಹಿರ ದತ್ತು ಪ್ರಕರಣದ ಅಪರಾಧ ಮಕ್ಕಳ ಮಾರಾಟ ಅಪರಾತ “ಮಕ್ಕಳನ್ನು ಮಾರುವವರಿಗೂ ಹಾಗೂ ಕೊಳ್ಳುವವರಿಗೂ ಬಾಲನ್ಯಾಯ ಕಾಯ್ದೆ 2015 ಸೆಕ್ಷನ್ 80, 81ರ ಅನ್ವಯ 5 ವರ್ಷಗಳವರೆಗೆ ಸೆರೆಮನೆ ವಾಸಕ್ಕೆ ರೂ.1 ಲಕ್ಷ ದಂಡ ವಿಧಿಸಬಹುದು. ಈ ಅಪರಾಧದಲ್ಲಿ ಆಸ್ಪತ್ರೆಯವರು ಶಾಮಿಲಾಗಿದ್ದರೆ ಶಿಕ್ಷೆಯ ಅವಧಿ 3 ವರ್ಷಗಳಿಗೆ ಕಡಿಮೆ ಇಲ್ಲದಂತೆ 7 ವರ್ಷಗಳವರೆಗೆ ವಿಸ್ತರಣೆ” ಸಾರ್ವಜನಿಕರ ಗಮನಕ್ಕೆ ಅನಾಥ, ಪರಿತ್ಯಕ್ತ ಮತ್ತು ಒಪ್ಪಿಸಲ್ಪಟ್ಟ ಮಕ್ಕಳ ಮಾಹಿತಿಯು ಚಿತ್ರದುರ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ದೂರವಾಣಿ ಸಂಖ್ಯೆ 08194-295822 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ ಪ್ರಕಟಣೆಯಲ್ಲಿ ಕೋರಿದ್ದಾರೆ.

 

Related Post

Leave a Reply

Your email address will not be published. Required fields are marked *