Breaking
Tue. Dec 24th, 2024

ನಗರದ ಅಭಿವೃದ್ಧಿಗೆ ಆಸ್ತಿ ತೆರಿಗೆಯೇ ಆರ್ಥಿಕ ಮೂಲ: ಮೇಯರ್ ಮುಲ್ಲಂಗಿ ನಂದೀಶ್…..!

ಬಳ್ಳಾರಿ ನಗರದ ಅಭಿವೃದ್ಧಿಯು ಶೇ.80 ರಿಂದ ಶೇ.90 ರಷ್ಟು ಸಾರ್ವಜನಿಕರು ಪಾವತಿಸುವ ಆಸ್ತಿ ತೆರಿಗೆಯ ಆರ್ಥಿಕ ಮೂಲ ಅವಲಂಬಿಸಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿಗಳ ತೆರಿಗೆ ಪಾವತಿಗೆ ಅನ್‌ಲೈನ್ ವ್ಯವಸ್ಥೆ ಜಾರಿಯಲ್ಲಿದ್ದು, ತಪ್ಪದೇ ಪಾವತಿಸಬೇಕು ಎಂದು ಮಹಾನಗರ ಪಾಲಿಕೆಯ ಮೇಯರ್ ಮುಲ್ಲಂಗಿ ನಂದೀಶ್ ಅವರು ತಿಳಿಸಿದ್ದಾರೆ.

ಗುರುವಾರ, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಸಭಾಂಗಣದಲ್ಲಿ `ಆಸ್ತಿ ತೆರಿಗೆ ಸಂಗ್ರಹ ಮತ್ತು ಮೂಲಭೂತ ಸೌಕರ್ಯಗಳು, ಪ್ಲಾಸ್ಟಿಕ್ ಬಳಕೆ, ಇನ್ನಿತರೇ ಸಮಸ್ಯೆಗಳು’ ವಿಷಯದ ಕುರಿತು ನಡೆದ ಕೈಗಾರಿಕೋದ್ಯಮಿಗಳು – ವ್ಯಾಪಾರಿಗಳ ಸಮ್ಮುಖದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಕೈಗಾರಿಕಾ ವಲಯದಲ್ಲಿ ಮೂಲಭೂತ ಸೌಲಭ್ಯಗಳ ಸಮಸ್ಯೆಗಳಿವೆ. ರಸ್ತೆ, ಬೀದಿ ದೀಪ, ಕುಡಿಯುವ ನೀರಿನ ಪೂರೈಕೆ ಸೇರಿ ಅನೇಕ ಸಮಸ್ಯೆಗಳು ಮಹಾನಗರ ಪಾಲಿಕೆಯ ಗಮನಕ್ಕೆ ಬಂದಿವೆ. ಕೆಲ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಬಹುದಾಗಿದ್ದು, ಕೈಗಾರಿಕಾ ವಲಯದಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಕೈಗಾರಿಕಾ ಪ್ರದೇಶದಲ್ಲಿಯೇ ಪ್ರತ್ಯೇಕ ಸಭೆ ನಡೆಸಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸುವೆ. ಮುಂದಿನ ದಿನಗಳಲ್ಲಿ ಕೈಗಾರಿಕಾ ವಲಯದಲ್ಲಿಯೇ ಸಭೆ ನಡೆಸಲಾಗುತ್ತದೆ ಎಂದರು.

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು ಮಾತನಾಡಿ, ರಸ್ತೆಗಳು, ಬೀದಿ ದೀಪಗಳ ನಿರ್ವಹಣೆ ಸೇರಿ ಅನೇಕ ಮೂಲಭೂತ ಸಮಸ್ಯೆಗಳಿವೆ. ಅವುಗಳನ್ನು ಪರಿಹರಿಸಿ ಕೈಗಾರಿಕೋದ್ಯಮಿಗಳಿಗೆ, ವ್ಯಾಪಾರಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಇದೇ ವೇಳೆ ಮಹಾನಗರ ಪಾಲಿಕೆ ವ್ಯಾಪ್ತಿಯ ಮೂಲಭೂತ ಸೌಲಭ್ಯಗಳಾದ ಬೀದಿ ದೀಪಗಳು, ಒಳಚರಂಡಿ ವ್ಯವಸ್ಥೆ, ರಸ್ತೆಗಳು, ಕುಡಿಯುವ ನೀರು, ಬೀದಿನಾಯಿಗಳ ಹಾವಳಿ, ಬಿಡಾಡಿ ದನಗಳ ಸಂಚಾರ, ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಸಂಚಾರ, ಕೋತಿಗಳ ಹಾವಳಿ, ಧೂಳು ಇನ್ನಿತರೆಗಳ ಕುರಿತು ವಿಷಯ ಪ್ರಸ್ತಾಪ ಮಾಡಿ, ಪಾಲಿಕೆಯು ತ್ವರಿತವಾಗಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಬಳ್ಳಾರಿ ಮಹಾನಗರ ಪಾಲಿಕೆಯ ಉಪ ಆಯುಕ್ತ ಅಬ್ದುಲ್ ರೆಹಮಾನ್ ಅವರು ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಆನ್‌ಲೈನ್‌ನಲ್ಲಿ ಪಾವತಿಸುವ ಕುರಿತು ವಿವರಣೆ ನೀಡಿದರು.

ಈ ವೇಳೆ ಮಹಾನಗರ ಪಾಲಿಕೆ ಸದಸ್ಯ ರಾಮಾಂಜಿನೇಯಲು, ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಉಪಾಧ್ಯಕ್ಷ ಎಸ್.ದೊಡ್ಡನಗೌಡ, ಜಂಟಿ ಕಾರ್ಯದರ್ಶಿ ಡಾ.ಮರ್ಚೇಡ್ ಮಲ್ಲಿಕಾರ್ಜುನಗೌಡ, ನಿಕಟಪೂರ್ವ ಅಧ್ಯಕ್ಷ ಬಿ.ಮಹಾರುದ್ರಗೌಡ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ವೇಣುಗೋಪಾಲ ಗುಪ್ತಾ, ಬಿ.ವಿ.ಬದ್ರಿನಾರಾಯಣ, ಜೆ.ರಾಜೇಶ್, ವಾಸುದೇವ ಜಿ. ಸಹಚಾರ್, ಟಿ.ಶ್ರೀನಿವಾಸರಾವ್, ನೇಕಾರ ನಾಗರಾಜ್, ಹ್ಯಾಲೀಸ್‌ಬ್ಲೂನÀ ಕೆ.ಎಂ.ಶಿವಮೂರ್ತಿ, ಕೆ.ಎಂ.ಭೋಗೇಶ್, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Post

Leave a Reply

Your email address will not be published. Required fields are marked *