ಶಿವಮೊಗ್ಗ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮವು 2024-25 ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆ ಸಿ.ಐ.ಟಿ./ಎನ್.ಐ.ಐ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತರರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ. ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವಾರ್ಷಿಕ ರೂ. 1.00 ಲಕ್ಷಗಳ ಸಾಲವನ್ನು ಶೇ. 2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ನಂತರ 4 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ರಿಂದ 35 ವರ್ಷ ವಯೋಮಿತಿಯೊಳಗಿದ್ದು, ಕುಟುಂಬದ ವಾರ್ಷಿಕ ವರಮಾನ ರೂ. 6.00 ಲಕ್ಷಗಳ ಮಿತಿಯೊಳಗಿರಬೇಕು.
ಆಸಕ್ತರು ವೆಬ್ಸೈಟ್ www.kacdc.karnataka.gov.in ರಲ್ಲಿ ದಿ: 15/12/2024 ರಂದು ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ಸಹಾಯವಾಣಿ 944845111 ಅಥವಾ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, ಭಂಡಾರಿ ಗ್ಯಾಸ್ ಏಜೆನ್ಸಿ ಹತ್ತಿರ, 1ನೇ ಪ್ಯಾರಲಾಲ್ ರಸ್ತೆ, ಗಾಂಧಿನಗರ, ಶಿವಮೊಗ್ಗ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸುವುದು.