ಶಿವಮೊಗ್ಗ : ತುಂಬಾಕು ಮುಕ್ತ ಯುವ ಅಭಿಯಾನ 2.0 ನಗರದ ನೆಹರು ಕೀಡಂಗಣದಲ್ಲಿ ಗುರುವಾರ ನಡೆದ ವಾಕಥಾನ್ ಕಾರ್ಯಕ್ರಮಕ್ಕೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ್ ನಾಯಕ್ ಹಸಿರು ನಿಶಾನೆ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಆರೋಗ್ಯ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಸುಬ್ಬಯ್ಯ ದಂತ ವೈದ್ಯಕೀಯ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜು, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ವೈದ್ಯಕೀಯ ಸಂಘ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಆಶ್ರಯದಲ್ಲಿ ವಾಕಥಾನ್ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಭಾರತದಲ್ಲಿ ತಡೆಗಟ್ಟಬಹುದಾದ ರೋಗಗಳು ಮತ್ತು ಸಾವಿಗೆ ತುಂಬಾ ಪ್ರಮುಖ ಕಾರಣಗಳಲ್ಲಿ ಕಂಡುಬಂದಿದೆ. ಇದರ ಪರಿಣಾಮವಾಗಿ ವಾರ್ಷಿಕವಾಗಿ 1.35 ಮಿಲಿಯನ್ ಸಾವುಗಳು ಸಂಭವಿಸುತ್ತಿವೆ. ಮಕ್ಕಳು ಹದಿಹರೆಯದರಲ್ಲಿ ಸೇವನೆ ಮಾಡುವ ಪ್ರಮಾಣ ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ.
ಕಳೆದ ವರ್ಷದ ತುಂಬಾಕು ಯುವ ಅಭಿಯಾನದ ಯಶಸ್ಸಿನ ಆಧಾರದ ಮೇಲೆ ಈ ವರ್ಷವೂ ‘ತಂಬಾಕು ಮುಕ್ತ ಯುವ ಅಭಿಯಾನ 2.0’ ಎಂಬ ರಾಷ್ಟಿçÃಯ ಅಭಿಯಾನಕ್ಕೆ ಸೆ.24 ರಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮುಕ್ತ ಚಾಲನೆ ನೀಡಿದ್ದು, ಜಿಲ್ಲೆಯಲ್ಲಿಯೂ ಅಭಿಯಾನವನ್ನು ಆಯೋಜಿಸಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಜಿಲ್ಲೆಗಳಲ್ಲಿ ಒಟ್ಟು 160 ಶಾಲೆ ತುಂಬಾ ಶಾಲೆಗಳನ್ನು ಮುಕ್ತಗೊಳಿಸಲಾಗಿದೆ ಎಂದು ಘೋಷಿಸಲಾಗಿದೆ. ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ಯ ಇಲಾಖೆಯು ಜಿಲ್ಲೆಯಲ್ಲಿ ಒಟ್ಟು 20 ಗ್ರಾಮಗಳನ್ನು ತುಂಬಾ ಮುಕ್ತ ಗ್ರಾಮಗಳೆಂದು ಘೋಷಿಸುವ ಗುರಿಯನ್ನು ನಿಗದಿಪಡಿಸಲಾಗಿದೆ.
ಪೊಲೀಸ್ ಇಲಾಖೆಯಿಂದ ಜಿಲ್ಲೆಯಲ್ಲಿ ಒಟ್ಟು 16 ತುಂಬಾಕು ದಾಳಿಗಳನ್ನು ಆಯೋಜಿಸಲಾಗಿದೆ, ಪ್ರಕರಣಗಳನ್ನು ದಾಖಲಿಸಿ ದಂಡವನ್ನು ವಿಧಿಸಲು ನಿಗದಿಪಡಿಸಲಾಗಿದೆ. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ತುಂಬು ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಜಾಗೃತಿ ಜಾಥಾಗಳನ್ನು ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಇಲಾಖೆ ಈ ಅಭಿಯಾನಕ್ಕೆ ಸಂಬಧಿಸಿದ ತಾಂತ್ರಿಕ ಸಲಹೆ ಮತ್ತು ಸೂಚನೆಗಳನ್ನು ಎಲ್ಲಾ ಇಲಾಖೆಗಳಿಗೆ ನೀಡುವ, ಪ್ರಚಾರ ಮಾಡುವ ಹಾಗೂ ಪ್ರತಿದಿನದ ಚಟುವಟಿಕೆಗಳನ್ನು ಭಾರತ ಸರ್ಕಾರದ ಎಂಐಎಸ್ ಪೋರ್ಟಲ್‌ನಲ್ಲಿ ನಮೂದಿಸಬೇಕಾಗಿದೆ. ಈ ರೀತಿಯಾಗಿ ತುಂಬಾ ಮುಕ್ತ ಯುವ ಅಭಿಯಾನ 2.0 ಅನ್ನು ಯಶಸ್ವಿಗೊಳಿಸಲು ಎಲ್ಲಾ ಇಲಾಖೆಗಳು ಮತ್ತು ಸಂಘ ಸಂಸ್ಥೆಗಳ ಸಹಭಾಗಿತ್ವದ ಚಟುವಟಿಕೆಗಳನ್ನು ಆಯೋಜಿಸಲಾಗಿದೆ ಎಂದು ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಡಾ. ನಟರಾಜ್ ಪ್ರಾರಂಭಿಸಿದರು.
ಜಾಥಾ ನೆಹರು ಕ್ರೀಡಾಂಗಣದಿಆದ ಹೊರಟು, ಗೋಪಿ ವೃತ್ತ ಮತ್ತು ಜಿಲ್ಲಾ ಪಂಚಾಯತ್ ರಸ್ತೆ ಮೂಲಕ ನೆಹರು ಕ್ರೀಡಾಂಗಣದಲ್ಲಿ ಸಮಾಪ್ತಿಗೊಂಡಿತು.
ಹಿರಿಯ ಸಿವಿಲ್ ನ್ಯಾಯಾಧಿಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯಾದ ಸಂತೋಷ್ ಎಂ.ಎಸ್, ಡಿವೈಎಸ್ ಪಿ ಬಾಬು ಅಂಜನಪ್ಪ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರಾಜ್ ನಾಯ್ಕ್ ಡಿಎಲ್ ಡಾ.ಕಿರಣ್, ಟಿಎಚ್‌ಎ ಡಾ.ಚಂದ್ರಶೇಖರ್, ರಾಷ್ಟಿಹೇÃಯರಾದ ತಂಬಾಕು ನಿಯಂತ್ರಣ ಕಾರ್ಯಕ್ರಮದ ಸಲಹೆಗಾರ , ಆರೋಗ್ಯ ಇಲಾಖೆ ಸಿಬ್ಬಂದಿಗಳು, ಸುಬ್ಬಯ್ಯ ದಂತ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳು ವೈದ್ಯರುದ್ದರು.