ಚಿತ್ರದುರ್ಗ : ಹಿರಿಯೂರು ತಾಲ್ಲೂಕು ಜವನಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಪಿಡಿಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿ.ಈಶ್ವರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಗ್ರಾಮ ಪಂಚಾಯಿತಿಗೆ ಸಂಬಂಧಿಸಿದ 15 ಹಣಕಾಸಿನ ಖರ್ಚು ವೆಚ್ಚದ ಮಾಹಿತಿಯನ್ನು ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ನೀಡದೆ ಉದ್ಧಟನವನ್ನು ತೋರುವುದರ ಜೊತೆಗೆ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿಗಳ ನೇತೃತ್ವದಲ್ಲಿ ನೇಮಿಸಲಾದ ತನಿಖಾ ತಂಡ ಆಡಿಟ್ ನಡೆಸಲು ಸೂಕ್ತ ದಾಖಲೆಗಳನ್ನು ನೀಡದೆ ಬೇಜವಬ್ದಾರಿಯನ್ನು ಪಿಡಿಓ ಸಿ.ಈಶ್ವರ ಪ್ರದರ್ಶಿಸಿದ್ದಾರೆ.
ಹಣಕಾಸಿನ ವ್ಯವಹಾರದ ಲೆಕ್ಕ ಒದಗಿಸದೆ ಕರ್ತವ್ಯ ಲೋಪ ತೋರಿದ್ದಾರೆ. ಸರ್ಕಾರಿ ನೌಕರರಾಗಿ ಕರ್ನಾಟಕ ನಾಗರೀಕ ಸೇವಾ (ನಡವಳಿ) ನಿಯಮಾವಳಿಗಳು-1966 ನಿಯಮ-3(I)(II)&(III) ಉಲ್ಲಂಘಿಸಿದ ಕಾರಣ ಪಿಡಿಓ ಸಿ.ಈಶ್ವರ್ ಅವರನ್ನು ಅಮಾನತು ಮಾಡಿರುವುದಾಗಿ ಜಿ.ಪಂ. ಸಿಇಓ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.