ಬಳ್ಳಾರಿ : ಬಿಸಿಯೂಟ ಸೇವಿಸಿ 45ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಳ್ಳಿ ತಾಲೂಕಿನ ಮೇತ್ರಿ ಹೊನ್ನಾಳಿ ಗ್ರಾಮದಲ್ಲಿ ನಡೆದಿದೆ.
ಸಾರ್ವಜನಿಕ ಪ್ರೌಢಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿದ ವಿದ್ಯಾರ್ಥಿಗಳಿಗೆ ವಾಂತಿ ಭೇದಿ ಕಾಣಿಸಿಕೊಂಡಿದೆ. ಅಸ್ವಸ್ಥ ವಿದ್ಯಾರ್ಥಿಗಳನ್ನು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಡುಗೆ ಕೆಲಸಗಾರರ ನಿರ್ಲಕ್ಷ್ಯದಿಂದ ಮಕ್ಕಳು ಅಸ್ವಸ್ಥರಾಗಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಸ್ಥಳಕ್ಕೆ ತಹಸೀಲ್ದಾರ್ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಭೇಟಿ ನೀಡಿ ವಿದ್ಯಾರ್ಥಿಗಳ ಆರೋಗ್ಯ ವಿಚಾರಿಸಿದರು. ನಿಷ್ಕಾಳಜಿ ವಹಿಸಿರುವ ಅಡುಗೆ ಸಿಬ್ಬಂದಿ ವಿರುದ್ಧ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು.