ಚಿತ್ರದುರ್ಗ : ನಗರದ ಐ.ಯು.ಡಿ.ಪಿ ಲೇಔಟ್‌ನ ನಿವಾಸಿ ಕೆ.ಅರುಣ್ ಕುಮಾರ್ (ಸು.43 ವರ್ಷ) ಕಾಣೆಯಾದ ಕುರಿತು ಅಕ್ಟೋಬರ್ 29ರಂದು ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಣೆಯಾದ ಅರುಣ್ ಕುಮಾರ್ ಸು.170 ಸೆ.ಮೀ ಎತ್ತರ, ಕೋಲು ಮುಖ, ಗೋಧಿ ಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುವರು. ಮನೆಯಿಂದ ಹೋಗುವಾಗ ಸಿಮೆಂಟ್ ಕಲರ್ ಜರ್ಕಿನ್, ಸಿಮೆಂಟ್ ಕಲರ್ ಪ್ಯಾಂಟ್ ಧರಿಸಿದ್ದರು.
ಈ ಮೆಲ್ಕಂಡ ವ್ಯಕ್ತಿಯ ಬಗ್ಗೆ ಮಾಹಿತಿ ಕಂಡು ಬಂದಲ್ಲಿ ಬಡಾವಣೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 9480803149, ವೃತ್ತ ನಿರೀಕ್ಷಕರ ದೂರವಾಣಿ ಸಂಖ್ಯೆ 08194223295 ಗೆ ಅಥವಾ ಪೊಲೀಸ್ ನಿಯಂತ್ರಣ ಕೋಣೆಗೆ ಸಂಪರ್ಕಿಸಬಹುದು ಪ್ರಕಟಣೆ ತಿಳಿಸಿದೆ.