ಚಿತ್ರದುರ್ಗ : ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಅಧಿರಕ್ಷಣಾ ಸಮಾಜ ಸಂಸ್ಥೆ ವತಿಯಿಂದ, ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆಯುತ್ತಿರುವ ವಾತ್ಸಲ್ಯ ಶಿಶುಪಾಲನಾ ಕೇಂದ್ರದಲ್ಲಿ ಗುರುವಾರ ಮಕ್ಕಳ ದಿನಾಚರಣೆ ಆಚರಿಸಲಾಯಿತು.
ಈ ವೇಳೆ ಮಕ್ಕಳಿಗೆ ಕೇಕ್ ಹಾಗೂ ಸಿಹಿ ತಿನಿಸು ವಿತರಿಸಲಾಯಿತು. ಮಕ್ಕಳಿಗಾಗಿ ಆಟ, ಹಾಡು, ಹಾಗೂ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಪವಿತ್ರ ಮಕ್ಕಳೊಂದಿಗೆ ಪಾಲ್ಗೊಂಡು ಸಂಭ್ರಮಿಸಿದರು.ಶಿಕ್ಷಕಿ ಎಸ್.ಪಿ.ವಿದ್ಯಾವತಿ, ಸಹಾಯಕರಾದ ಆಶಾ ಮತ್ತು ಮಧು ಉಪಸ್ಥಿತರಿದ್ದರು.