ಶಿವಮೊಗ್ಗ : ಜಿಲ್ಲಾ ಆಡಳಿತ , ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ಕುರುಬರ ಸಂಘ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನ.18 ರಂದು ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಕನಕದಾಸರ ಜಯಂತಿಯನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ನೆರೆವೇರಿಸಲ್ಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪ ಆಗಮಿಸಲಿದ್ದಾರೆ. ಶಿವಮೊಗ್ಗ ನಗರ ಶಾಸಕ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಸಂಸದರು, ವಿಧಾನ ಸಭಾ/ವಿಧಾನ ಪರಿಷತ್ ಶಾಸಕರು, ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರುಗಳು, ಜನ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಣಾ ಅಧಿಕಾರಿಗಳು, ವಿವಿದ ಸಂಘ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲ್ಲಿದ್ದಾರೆ.
ಕಾರ್ಯಕ್ರಮದಲ್ಲಿ ಶಿವಮೊಗ್ಗ ರಾಷ್ಟ್ರೀಯ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ. ಚಿದಾನಂದ ಎನ್.ಕೆ ರವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.