ಚಿತ್ರದುರ್ಗ : ದೇಶದ ಸಲುವಾಗಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಭಗವಾನ್ ಬಿರ್ಸಾ ಮುಂಡಾ ಅವರ ಹೆಸರಿನಲ್ಲಿ ಶಾಲಾ ಕಾಲೇಜುಗಳು ಪ್ರಾರಂಭವಾದವು. ಆಗ ಮಾತ್ರ ಯುವ ಜನತೆಗೆ ಅವರ ಹೋರಾಟದ ಮಹತ್ವ ಹಾಗೂ ಅವರ ಪರಿಚಯ ಕಾರ್ಯಕ್ರಮ ಎಂದು ಸಂಸದ ಗೋವಿಂದ ಎಂಕಾರಜೋಳ ಪ್ರಕಟಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಮೀಪದ ಕ್ರೀಡಾ ಭವನದಲ್ಲಿ ಶುಕ್ರವಾರ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ಆಧುನಿಕ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಧರ್ತಿ ಆಭಾ ಭಗವಾನ್ ಬಿರ್ಸಾ ಮುಂಡಾ ಅವರ 150 ನೇ ಜನ್ಮ ವಾರ್ಷಿಕೋತ್ಸವ ಬುಡಕಟ್ಟು ಸಮುದಾಯಗಳ ಹೆಮ್ಮೆಯ ದಿನಾಚರಣೆ ಹಾಗೂ ಧರ್ತಿ ಆಭಾ ಜನಜಾತಿಯ ಗ್ರಾಮ ಉತ್ಕರ್ಷ ಅಭಿಯಾನವನ್ನು ಅವರು ಉದ್ಘಾಟಿಸಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಬಿರ್ಸಾ ಮುಂಡಾ ಅವರ ಪರಿಚಯವನ್ನು ಸರ್ಕಾರಿ ಕಾರ್ಯಕ್ರಮಗಳ ಮೂಲಕ ಹೆಚ್ಚಿನ ಪರಿಚಯ ಮಾಡಿಕೊಳ್ಳಬೇಕು. ಇಂದಿನ ಯುವ ಜನತೆಗೆ ಅವರ ಪರಿಚಯ ಹಾಗೂ ಹೋರಾಟದ ಮಹತ್ವವೂ ತಿಳಿಯಲಿದೆ. ಇದರಿಂದ ದೇಶದ ಐಕ್ಯತೆ, ಏಕತೆ, ದೇಶಪ್ರೇಮ ಬೆಳೆಸುವ ಹಾಗೂ ದೇಶದ ಮಹತ್ವದ ಬಗ್ಗೆ ಬೆಳಕು ಚೆಲ್ಲುವ ಯುವ ಜನಾಂಗಕ್ಕೆ ಪ್ರೋತ್ಸಾಹ ನೀಡುವಂತೆಯೂ ಆಗಲಿದೆ ಎಂದು ಪ್ರಕಟಿಸಿದ್ದಾರೆ.
ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವವನ್ನು ದೇಶದ ಉದ್ದಗಲಕ್ಕೂ ಆಚರಣೆ ಮಾಡಲಾಗುತ್ತಿದೆ. ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಅನೇಕ ಆದಿವಾಸಿಗಳು, ಗುಡ್ಡಗಾಡು ಜನರು, ಕೆಳವರ್ಗದವರು ಹೋರಾಟ ಮಾಡಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದಾರೆ ಎಂದು ತಿಳಿಸಿದ ಅವರು, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಲಗಲಿ ಬೇಡರ ಕೊಡುಗೆ ಅಪಾರ ಎಂದು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ ವತಿಯಿಂದ ಮಣ್ಣು ಪರೀಕ್ಷೆ ಕಾರ್ಡ್ ಹಾಗೂ ಕೃಷಿ ಯಂತ್ರೋಪಕರಣಗಳನ್ನು ಫಲಾನುಭವಿಗಳಿಗೆ ಸಂಸದ ಗೋವಿಂದ ಎಂ. ಕಾರಜೋಳ ವಿತರಿಸಿದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ಮಾಧುರಿ ಗಿರೀಶ್, ಮುರುಳಿ ಇದ್ದರು.