Breaking
Mon. Dec 23rd, 2024

ಪತ್ರಿಕೋದ್ಯಮ ಪದವೀಧರರ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿ ನವೆಂಬರ್ 25 ರವರೆಗೆ ವಿಸ್ತರಣೆ…..!

ಬೆಂಗಳೂರು ನಗರ ಜಿಲ್ಲೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೆಂಗಳೂರು ನಗರ ಜಿಲ್ಲಾ ಕಛೇರಿಯಲ್ಲಿ 2024-25 ನೇ ಸಾಲಿಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ನವೆಂಬರ್ 25 ರವರೆಗೆ ವಿಸ್ತರಿಸಲಾಗಿದೆ.

ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿ ಹಾಗೂ ಪರಿಶಿಷ್ಟ ಪಂಗಡದ ಒಬ್ಬರ ಅರ್ಹತೆ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಬೇಕು. ಒಟ್ಟು 12 ತಿಂಗಳ ಅಪರಂಟೀಸ್ ತರಬೇತಿಯಲ್ಲಿ ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಗೆ ಮಾಹೆಯಾನ ರೂ 15,000 ಗಳ ಸ್ಟೈಪೆಂಡ್ ನೀಡಲಾಗುವುದು.

ಇಲಾಖೆ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಅರ್ಜಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಾಸ್‌ಪೋರ್ಟ್ ಅಳತೆಯ ಎರಡು ಭಾವಚಿತ್ರ, ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹಾಗೂ ಇತರೆ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ನವೆಂಬರ್ 25 ರೊಳಗಾಗಿ ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ , 2ನೇ ಮಹಡಿ, ನಂ.17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560001, ಇಲ್ಲಿ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗಿದೆ. 

 

ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ “ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ” ಎಂದು ನಮೂದಿಸಬೇಕು.

 

ಬೆಂಗಳೂರಿನಲ್ಲಿ ವಾಸಿಸುವ ಹಾಗೂ ಅರ್ಹ ಅಭ್ಯರ್ಥಿಗಳ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-22028059, ಇ-ಮೇಲ್ – urbaninformation2016@gmail.com ಮೊ.ಸಂ: 9480841219 ಕಚೇರಿಯಲ್ಲಿ ಮಾತ್ರ ಸಂರ್ಪಕಿಸಲಾಯಿತು ಎಂದು ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತರ ಜಿಲ್ಲೆಯ ಅಭ್ಯರ್ಥಿಗಳು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳನ್ನು ಸಂಪರ್ಕಿಸಬಹು ದು.

Related Post

Leave a Reply

Your email address will not be published. Required fields are marked *