ದಾವಣಗೆರೆ : ಜಿಲ್ಲಾಡಳಿತ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಗಾಜಿನ ಮನೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಇದರ ಅಂಗವಾಗಿ ನವೆಂಬರ್ 16 ರ ಸಂಜೆ ಸುವರ್ಣ ಸಂಭ್ರಮ ಕಾರ್ಯಕ್ರಮದಲ್ಲಿ
ಯುಗಧರ್ಮ ರಾಮಣ್ಣ ಸಿದ್ದನಮಠ ಅವರಿಂದ ಜಾನಪದ ಗೀತೆಗಳು, ಪಂಡಿತ್ ರವೀಂದ್ರ ಸೊರಗಾವಿ ಹಾಗೂ ಕುಮಾರಿ ಮೀರಾ ಅವರಿಂದ ಹಿಂದೂಸ್ತಾನಿ ಸಂಗೀತ, ಪಲ್ಲವಿ ಮತ್ತು ಸಂಗಡಿಗರಿಂದ ಮಹಿಳಾ ವೀರಗಾಸೆ ಕಾರ್ಯಕ್ರಮ ಜರುಗಿಸಲಾಯಿತು.
ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ. ವೀಕ್ಷಿಸಿದರು. ಅಪರ ಜಿಲ್ಲಾಧಿಕಾರಿ ಪಿ.ಎನ್ ಲೋಕೇಶ್, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.