ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಕೆಂಗನಹಳ್ಳಿ ಗ್ರಾಮದ ಹೊರವಲಯದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ.
ರೈತರು ಹೊಲಗಳಿಗೆ ಹೋದಾಗ ಚಿರತೆ (ಲಿಯೋಪೋಲ್ಡ್) ಕಂಡಿದ್ದು, ಕೆಂಗನಹಳ್ಳಿ, ಗುಣನಹಳ್ಳಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಹೀಗಾಗಿ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯ ಮುನಿಸ್ವಾಮಿ ಡ್ರೋನ್ ಕ್ಯಾಮೆರಾ ತಂದು ಚಿರತೆಯ ಚಲನವಲನ ಸೆರೆ ಹಿಡಿದಿದ್ದಾರೆ.
ಕೆಂಗನಹಳ್ಳಿ ಬೆಟ್ಟದಲ್ಲಿ ಚಿರತೆ ಇರುವುದು ದೃಢಪಟ್ಟಿದ್ದು, ಡ್ರೋನ್ ಕ್ಯಾಮೆರಾದಲ್ಲಿ ಚಿರತೆ ಸೆರೆಯಾಗಿದೆ. ಚಿರತೆ ಹಿಡಿಯುವಂತೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ