ಚಿತ್ರದುರ್ಗ : ಜಿಲ್ಲೆಯ ವಸತಿ ನಿಲಯಗಳು, ಆಸ್ಪತ್ರೆ, ಶಾಲೆ, ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯಗಳು ಸುಸ್ಥಿತಿಯಲ್ಲಿರುವಂತೆ ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಐಒ ಎಸ್.ಜೆ.ಸೋಮಶೇಖರ್ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ವಿಶ್ವ ಶೌಚಾಲಯ ದಿನಾಚರಣೆ ಪ್ರಯುಕ್ತ ಶೌಚಾಲಯ ಮತ್ತು ನೀರು ನಿರ್ವಹಣೆ ಕುರಿತು ಚರ್ಚಿಸಲು ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲಾ ಆಸ್ಪತ್ರೆ, ಶಾಲೆ ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯಗಳು ಸಣ್ಣಪುಟ್ಟ ದುರಸ್ಥಿಗಳು ಇವೆ ಎಂದು ಸೂಚಿಸಲಾಗಿದೆ.
ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸುವ ಶೌಚಾಲಯಗಳನ್ನು ನಿರಂತರವಾಗಿ ಬಳಸುವಂತೆ ಪ್ರೇರೇಪಿಸುವ ಉದ್ದೇಶದಿಂದ ವಿಶ್ವ ಶೌಚಾಲಯ ದಿನ ಆಚರಿಸಲಾಗುತ್ತಿದೆ. ನ.19 ರಿಂದ ಡಿ.20ರ ವರೆಗೆ ಜಿಲ್ಲೆಯಾದ್ಯಂತ ನಮ್ಮ ಶೌಚಾಲಯ ನಮ್ಮ ಗೌರವ ಆಂದೋಲನವನ್ನು ಆಯೋಜಿಸಲಾಗಿದೆ. ಅಂದದ ಶೌಚಾಲಯ-ಆನಂದದ ಜೀವನ ಎಂಬ ಘೋಷ ವಾಕ್ಯದೊಂದಿಗೆ ತಾಲ್ಲೂಕು ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಆಂದೋಲನ ನಡೆಸಿ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು. ಈ ದಿನಾಚರಣೆಯು ಬಹಿರ್ದೆಸೆ ಮುಕ್ತ ಸ್ಥಿತಿಯ ಸ್ಥಾನಮಾನವನ್ನು ಉಳಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ತಿಳಿಸಿದ ಅವರು, ಗ್ರಾಮ ಪಂಚಾಯಿತಿ ಹಂತ, ಸುಂದರ ವೈಯಕ್ತಿಕ ಗೃಹ ಶೌಚಾಲಯ (ಉತ್ತಮ ಶೌಚಾಲಯ)ಸ್ಪರ್ಧೆಯನ್ನು ನಿರ್ವಹಿಸಬೇಕು. ಅದೇ ರೀತಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಸಮುದಾಯ ಶೌಚಾಲಯ ಸ್ಪರ್ಧೆಗಳನ್ನು ನಡೆಸಬೇಕು. ತದನಂತರ ಜಿಲ್ಲಾ ಮತ್ತು ಹಂತದ ಹಂತದಲ್ಲಿ ವಿಜೇರಿಗೆ ಪುರಸ್ಕಾರಗಳನ್ನು ನೀಡಿ ಗೌರವಿಸುವಂತೆ ಪ್ರಕಟಿಸಿದರು.
ಸ್ಥಳೀಯ ಪ್ರಭಾವಿಗಳು, ಗುರುತಿಸಿತಾ ರಾಯಬಾರಿ, ಅವರನ್ನು ಈ ನಮ್ಮ ಶೌಚಾಲಯ-ನಮ್ಮ ವಿಶೇಷ ಆಂದೋಲನದಲ್ಲಿ ತೊಡಗಿಸಿಕೊಳ್ಳಲು ಕ್ರಮವಹಿಸಬೇಕು. ಜಿಲ್ಲೆಯಲ್ಲಿರುವ ಕೈಗಾರಿಕೆಗಳು, ಸ್ವಯಂ ಸೇವಾ ಸಂಘಗಳು, ಸರ್ಕಾರೇತರ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಇತರ ಸಾಂಸ್ಥಿಕ ಸಂಸ್ಥೆಗಳನ್ನು ಗುರುತಿಸಿ, ಆಂದೋಲನದ ಭಾಗವಾಗಿರುವ ಈ ರೋಗಿಗಳಿಗೆ ಪುರಸ್ಕಾರ ವಿತರಣೆ, ಶೌಚಾಲಯಗಳ ಸೌಂದರ್ಯೀಕರಣ ಪುರಸ್ಕಾರ ನೀಡುವ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು. ಉತ್ತಮ ಯಶೋಗಾಥೆ ಮತ್ತು ಉತ್ತಮ ಅಭ್ಯಾಸಗಳ ಕುರಿತು ವರದಿಗಳನ್ನು ಸಿದ್ದಪಡಿಸುವಂತೆ ಸೂಚಿಸಿದರು.
ನಿರುಪಯುಕ್ತ ಸಮುದಾಯ ಶೌಚಾಲಯಗಳನ್ನು ಗುರುತಿಸುವುದು ಮತ್ತು ಅವರ ಬಳಕೆಗೆ ಯೋಗ್ಯ ರೀತಿಯಲ್ಲಿ ಪರಿವರ್ತಿಸಬೇಕು. ನೈರ್ಮಲ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಕಾರ್ಮಿಕರು, ಮತದಾರರನ್ನು ಗುರುತಿಸಿ, ತಾಲ್ಲೂಕುವಾರು ಗ್ರಾಮ ಪಂಚಾಯತಿ ಪಟ್ಟಿತಾಗಾರರಿಗೆ ಆರೋಗ್ಯ ಶಿಬಿರ ಹಾಗೂ ಸುರಕ್ಷಾ ಕವಚಗಳನ್ನು ಹಾಗೂ ವಿವಿಧ ದೊರೆಯುವ ಯೋಜನೆಗಳ ಸೌಲಭ್ಯಗಳನ್ನು ಒದಗಿಸಲು ಮತ್ತು ಮಂಜೂರಾತಿ ಆದೇಶಗಳನ್ನು ನೀಡಲು ಕ್ರಮವಹಿಸಬೇಕು.
ಬಯಲು ಬಹಿರ್ದೆಸೆ ಸುಸ್ಥಿರತೆಯನ್ನು ಪಡೆದುಕೊಳ್ಳುವಲ್ಲಿ ಗಣನೀಯ ಕೊಡುಗೆ ನೀಡಿದವರನ್ನು ಗುರುತಿಸಿ, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ, ಗೌರವಿಸಬೇಕು ಎಂದು ಅವರು ತಿಳಿಸಿದರು. ಅವರು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಗಾಯತ್ರಿ, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು .