ಬೆಂಗಳೂರು ನಗರ ಜಿಲ್ಲೆ : ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಹಾಗೂ ಅವರ ಅವಲಂಬಿತ ಯುವಕ ಮತ್ತು ಯುವತಿಯರಿಂದ ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಗ್ರಾಫಿಕ್ ಡಿಸೈನಿಂಗ್ ಮತ್ತು ವಿಡಿಯೋ ಎಡಿಟಿಂಗ್, ಸಾಫ್ಟ್ವೇರ್, ಮಲ್ಟಿಮೀಡಿಯಾ ಮತ್ತು ಇಲೂಸ್ಟ್ರೇಷನ್ ಕೋರ್ಸ್ ಗಳಿಗೆ ತರಬೇತಿ ನೀಡಲಾಗುವುದು.
ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಮತ್ತು ಅವರ ಅವಲಂಬಿತ ಯುವಕ ಮತ್ತು ಯುವತಿಯರು 18 ರಿಂದ 35 ವಯಸ್ಸಿನವರಾಗಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್ ಐ.ಡಿ ಕಾರ್ಡ್ ಹೊಂದಿರಬೇಕು.
ಆಸಕ್ತರು ಜಿಲ್ಲಾ ಅಧಿಕಾರಿಗಳ ಕಛೇರಿ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ, ಬೆಂಗಳೂರು ನಗರ ಜಿಲ್ಲೆ, ಸೈರಾಬಾಗ್ ಕಟ್ಟಡ #19/4, ಕನ್ನಿಂಗ್ ಹ್ಯಾಮ್ ರಸ್ತೆ, ಬೆಂಗಳೂರು -52 ಇಲ್ಲಿಗೆ ಡಿಸೆಂಬರ್ 5 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-29550306/ 29551320 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.