ಚಿತ್ರದುರ್ಗ : ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ವಿದ್ಯಾರ್ಥಿಗಳಿಂದ ನ.21 ರಂದು ಸಂಜೆ 4 ಗಂಟೆಗೆ ನಗರದ ತರಾಸು ರಂಗಮಂದಿರದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ದಾವಣಗೆರೆ ವಿ.ವಿ.ಕುಲಪತಿ ಪ್ರೊ.ಬಿ.ಡಿ.ಕುಂಬಾರ ಕಾರ್ಯಕ್ರಮ ಉದ್ಘಾಟಿಸಿದರು. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ವೈ.ಯುವರಾಜ್ ಅಧ್ಯಕ್ಷತೆ ವಹಿಸುವರು. ಮಕ್ಕಳ ಹೃದಯ ತಜ್ಞ ಡಾ.ವಿಜಯಲಕ್ಷ್ಮೀ ಬಾಳೆಕುಂದ್ರಿ ವಿಶೇಷ ಆಹ್ವಾನಿತರಾಗಿ ಹಾಗೂ ಅತಿಥಿಗಳಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್, ಜಿಲ್ಲಾ ಶಸ್ತ್ರ ಚಿತ್ಸಕ ಡಾ.ರವೀಂದ್ರ ಇದ್ದರು.