Breaking
Mon. Dec 23rd, 2024

ದಿಶಾ ಸಭೆಯಲ್ಲಿ ಸಂಸದ ಗೋವಿಂದ ಎಂ ಕಾರಜೋಳ ಸೂಚನೆ ಜಲಜೀವನ್ ಮಿಷನ್: ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ

ಚಿತ್ರದುರ್ಗ : ಪ್ರತಿ ಮನೆಗೂ ನಳ ಸಂಪರ್ಕದ ಮೂಲಕ ಶುದ್ಧ ಕುಡಿಯುವ ನೀರು ಪೂರೈಸುವ ಜಲ ಜೀವನ ಮಿಷನ್ ಯೋಜನೆ ಅನುಷ್ಠಾನ ಕಾರ್ಯವನ್ನು ಜಿಲ್ಲೆಯಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಕೇಂದ್ರ ಪುರಸ್ಕøತ ಯೋಜನೆಗಳ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿದ್ದರು.

      ಜಿಲ್ಲೆಯಲ್ಲಿ ಕೈಗೊಂಡಿರುವ ಜಲಜೀವನ್ ಮಿಷನ್ ಯೋಜನೆ ಕಾಮಗಾರಿಯ ಗುಣಮಟ್ಟದಿಂದ ಕೂಡಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಸಂಬಂಧಪಟ್ಟ ಅಧಿಕಾರಿಗಳು ಖುದ್ದಾಗಿ ಸ್ಥಳ ಪರಿಶೀಲನೆ ನಡೆಸಿದಾಗ ಮಾತ್ರ ಗುಣಮಟ್ಟದ ಕಾಮಗಾರಿ ಆಗಲು ಸಾಧ್ಯ. ಅಧಿಕಾರಿಗಳು ಕಾಮಗಾರಿ ಗುಣಮಟ್ಟದ ಬಗ್ಗೆ ಹೆಚ್ಚಿನ ಗಮನಹರಿಸಬೇಕು. ಜಲಜೀವನ್ ಮಿಷನ್ ಯೋಜನೆಡಿ ಜಿಲ್ಲೆಗೆ ಸುಮಾರು 4 ಸಾವಿರ ಕೋಟಿ ರೂ. ಅನುದಾನ ಮಂಜೂರಾಗಿದ್ದರೆ, ಸರ್ಕಾರದ ಅನುದಾನ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

      ಜಲಜೀವನ ಮಿಷನ್ ಯೋಜನೆಯಿಂದಾಗಿ ಹಳ್ಳಿಗಳಲ್ಲಿ ಹೊಸ ಚರಂಡಿ ನಿರ್ಮಾಣವಾಗಿದೆ. ಕಾಮಗಾರಿಗಳನ್ನು ಸಮರ್ಪಕವಾಗಿ ಮಾಡಿಲ್ಲ. ಈ ಕುರಿತು ಸಾಕಷ್ಟು ದೂರುಗಳು ಬರುತ್ತಿವೆ ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಜಲಜೀವನ ಮಿಷನ್ ಯೋಜನೆ ಕಾಮಗಾರಿ ಕುರಿತು ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಜಲಜೀವನ ಮಿಷನ್ ಯೋಜನೆ ಕಾಮಗಾರಿ ಗುಣಮಟ್ಟದ ಕುರಿತು ಹೆಚ್ಚಿನ ಗಮನಹರಿಸಬೇಕು. ಜಿಲ್ಲಾಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಬಗೆಹರಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಆರ್.ಡಬ್ಲ್ಯೂಎಸ್ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್ ಅವರಿಗೆ ಸೂಚಿಸಿದರು.

      ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಬಸನಗೌಡ ಪಾಟೀಲ್ ಮಾತನಾಡಿ, ಜಲಜೀವನ ಮಿಷನ್ ಯೋಜನೆಡಿ ಜಿಲ್ಲೆಯ 6 ತಾಲೂಕಿನ ಬ್ಯಾಚ್ 1, 2, 3 ಮತ್ತು 4ರಲ್ಲಿ ಒಟ್ಟು 1568 ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, 1568 ಕಾಮಗಾರಿಗಳಿಗೆ ಕಾರ್ಯಾದೇಶ ನೀಡಲಾಗಿದೆ. ಇದರಲ್ಲಿ 685 ಕಾಮಗಾರಿಗಳು ಪೂರ್ಣಗೊಂಡಿದ್ದು, 798 ಕಾಮಗಾರಿಗಳು ಪ್ರಗತಿಯಲ್ಲಿವೆ. ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ.

 ಜಿಲ್ಲೆಯ ಎಲ್ಲ ಜನವಸತಿಗಳಿಗೆ ಶಾಶ್ವತ ಕುಡಿಯುವ ನೀರಿನ ಆಧಾರದ ಮೇಲೆ ಸುರಕ್ಷಿತ ನೀರು ಪೂರೈಸಲು ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಒಟ್ಟು 11 ಯೋಜನೆಗಳನ್ನು ಅನುಮೋದಿಸಲಾಗಿದೆ, ಅನುಮೋದಿತ ಯೋಜನೆಗಳು ಮೇಲ್ಮುಖವಾಗಿ 02 ಬಹುಗ್ರಾಮ ಮುಕ್ತಾಯ ಕುಡಿಯುವ ನೀರಿನ ಯೋಜನೆಗಳು, 02 ಯೋಜನೆಗಳು ಬಾಕಿ 07 ಯೋಜನೆಗಳು ವಿವಿಧ ಪ್ರಗತಿಯಲ್ಲಿದ್ದು, ತುರ್ತಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ.

ಬೇಸಿಗೆಯಲ್ಲಿ ರೈತರಿಗೆ ವಿದ್ಯುತ್ ಸಮಸ್ಯೆ ಆಗದಿರಲಿ: ರೈತರು ಬೆಳೆ ಬೆಳೆಯಲು ಹೆಚ್ಚಿನ ವಿದ್ಯುತ್ ಹಂಚಿಕೆಗೆ ಪ್ರಸ್ತಾವನೆ ಸಲ್ಲಿಸಬೇಕು. ಬೇಸಿಗೆಯಲ್ಲಿ ರೈತರಿಗೆ ವಿದ್ಯುತ್ ಸಮಸ್ಯೆ ಆಗದಂತೆ ಕ್ರಮವಹಿಸಬೇಕು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

      ಕಳೆದ ವರ್ಷ ಮಳೆ ಕೊರತೆಯಿಂದಾಗಿ ವಿದ್ಯುತ್ ಬಳಕೆ ಕಡಿಮೆಯಾಗಿದೆ. ಈ ಬಾರಿ ಜಿಲ್ಲೆಯಲ್ಲಿ ಉತ್ತಮ ಮಳೆ, ಕೆರೆ, ಕಟ್ಟೆಗಳ ಭರ್ತಿ, ಅಂತರ್ಜಲ ವೃದ್ಧಿಯಾಗಿದೆ. ಯಾವುದೇ ಜಿಲ್ಲೆಯ ಬೆಳೆ ಬೆಳೆಯಲು ವಿದ್ಯುತ್ ಸಮಸ್ಯೆಯಾಗಬಾರದು ಎಂದು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ತಜ್ಞ ವೈದ್ಯರಿಗೆ ಸೂಚನೆ: ಜಿಲ್ಲಾ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯರು ನೇಮಕ ಮಾಡಿಕೊಳ್ಳುವ ಸಂಬಂಧ ಅರ್ಜಿಯನ್ನು ಆಹ್ವಾನಿಸುವಂತೆ ಗೋ ಸಂಸದವಿಂದ ಎಂ ಕಾರಜೋಳ ಅವರು ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.

ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲು, ಯಾರು ಸಹ ಅರ್ಜಿಯನ್ನು ಸಲ್ಲಿಸಿದ್ದಾರೆ. ಮತ್ತೊಮ್ಮೆ ನೇಮಕಾತಿ ಹೊರಡಿಸಲಾಗಿದೆ ಎಂದು ಅಧಿಕಾರಿಗಳ ಸಭೆಗೆ ಮಾಹಿತಿ ನೀಡಲಾಗಿದೆ.

      ಮಾರ್ಚ್ 31 ರೊಳಗೆ ಕಾಮಗಾರಿ ಪೂರ್ಣಗೊಳಿಸಿ: 2024-25ನೇ ಸಾಲಿನ ವಿವಿಧ ಇಲಾಖೆಯ ಕಾಮಗಾರಿಗಳು ಹಾಗೂ ಯೋಜನೆಗಳನ್ನು ಮುಂಬರುವ ಮಾರ್ಚ್ 31 ರೊಳಗೆ ಪೂರ್ಣಗೊಳಿಸಬೇಕು ಎಂದು ಸಂಸದ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಗ್ರಾಮ ಸಡಕ್-4 ಶೀಘ್ರ ಪ್ರಾರಂಭ: ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ-4ನೇ ಹಂತ ಶೀಘ್ರದಲ್ಲಿ ಪ್ರಾರಂಭವಾಗಲಿದೆ, ಗ್ರಾಮ ಸಂಪರ್ಕ ಕಲ್ಪಿಸುವ ಗ್ರಾಮ ಸಡಕ್ ರಸ್ತೆ ಕಾಮಗಾರಿಗೆ ಅರ್ಹ ಗ್ರಾಮಗಳ ಪಟ್ಟಿ ಮಾಡಿ ಪ್ರಸ್ತಾವನೆ ಸಲ್ಲಿಸುವಂತೆ ಸಂಸದ ಗೋವಿಂದ ಕಾರಜೋಳ ಅಧಿಕಾರಿಗಳಿಗೆ ಸೂಚನೆ.

ಸಭೆಯಲ್ಲಿ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಅಧಿಕಾರಿಗಳು ಇದ್ದರು.

Related Post

Leave a Reply

Your email address will not be published. Required fields are marked *