ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ದೀರ್ಘಾವಧಿ ಕೋರ್ಸ್‍ಗಳು ನಡೆಯುತ್ತಿದ್ದು, ಈ ಕೋರ್ಸ್‍ಗೆ ಅಗತ್ಯವಿರುವ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಅಥವಾ ಬಿಇ (ಮೆಕ್ಯಾನಿಕಲ್) ಅಥವಾ ಎಂಟೆಕ್ (ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಒರ್ವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಚಿತ್ರದುರ್ಗ, ಸರ್ವೆ.ನಂ. 44, ಹಳೆಯ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಾಳ್ ದೂರವಾಣಿ ಸಂಖ್ಯೆ 9738465834, 9481866855, 9945616114 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.