ಶಿವಮೊಗ್ಗ : ರಾಜ್ಯ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡುರಾವ್‌ರವರು ನ.26 ಮತ್ತು 27 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ನ.26 ರಂದು ಮಧ್ಯಾಹ್ನ 1.55ಕ್ಕೆ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಿ, ಸಾಗರಕ್ಕೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ. ಎಂ. 3.00ಕ್ಕೆ ಸಾಗರ ತಾಲೂಕಿನ ತಾಳಗುಪ್ಪ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಬರುವ ಹಿರೇಮನೆ ಹಾಗೂ ತಲವಾಟ ಗ್ರಾಮಗಳಲ್ಲಿ ಮಂಗನಕಾಯಿಲೆ (ಕೆ.ಎಫ್.ಡಿ) ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ಎಂ. 4.00ಕ್ಕೆ ಸಾಗರ ಉಪ ವಿಭಾಗ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಸಂಜೆ 5.00ಕ್ಕೆ ಸಾಗರದ ಪ್ರವಾಸಿ ಮಂದಿರದಲ್ಲಿ ಮಂಗನಕಾಯಿ ಕಂಡುಬಂತು ಜಿಲ್ಲೆಗಳಲ್ಲಿ ಕೈಗೊಂಡಿರುವ/ಕೈಗೊಳ್ಳಬೇಕಾಗಿರುವ ಸುರಕ್ಷಾ ಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 7.00 ಸಾಗರದಿಂದ ಶಿವಮೊಗ್ಗಕ್ಕೆ ಆಗಮಿಸಿ ಊಟದ ಹೌಸ್‌ನಲ್ಲಿ ತಂಗಲಿದ್ದಾರೆ.
ನ. 27ರಂದು ಬೆಳಗ್ಗೆ 8.20ಕ್ಕೆ ಭದ್ರಾವತಿ ತೆರಳಿ ಭದ್ರಾವತಿ ತಾಲೂಕು ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಬೆ. 9.25 ಭದ್ರಾವತಿಯಿಂದ ಶಿವಮೊಗ್ಗ ಆಗಮಿಸಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ: 2.15ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ. ಎ. ಹಿದಾಯತ್ತುಲ್ಲರವರು ಪ್ರಕಟಣೆಯಲ್ಲಿ.