ಶಿವಮೊಗ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆ ಇವರುಗಳ ಸಂಯುಕ್ತಾಶ್ರಯದಲ್ಲಿ ನ.26 ರಂದು ಬೆಳಗ್ಗೆ 11.00ಕ್ಕೆ ಡಾ. ಬಿ.ಆರ್. ಅಂಬೇಡ್ಕರ್ ಭನದಲ್ಲಿ ಸಂವಿಧಾನ ದಿನ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧುಬಂಗಾರಪ್ಪ ನೆರೆವೇರಿಸಲ್ಲಿದ್ದಾರೆ. ವಿಶೇಷ ಆಹ್ವಾನಿತರಾಗಿ ಸಮಾಜ ಕಲ್ಯಾಣ ಇಲಾಖೆ ಇಲಾಖೆ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ, ಭದ್ರಾವತಿ ಶಾಸಕ ಹಾಗೂ ಕ.ಗ್ರಾ.ಮೂ.ಸೌ.ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ ಮತ್ತು ಸಾಗರ ಶಾಸಕ ಹಾಗೂ ಕ.ಅ.ಕೈ.ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಇವರುಗಳು ಆಗಮಿಸಲಿದ್ದಾರೆ. ಶಿವಮೊಗ್ಗ ನಗರ ಶಾಸಕ ಎಸ್.ಎನ್ ಚನ್ನಬಸಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ಸಂಸದರು, ವಿಧಾನ ಸಭಾ/ವಿಧಾನ ಪರಿಷತ್ ಶಾಸಕರು, ನಿಗಮ/ಮಂಡಳಿ/ಪ್ರಾಧಿಕಾರಗಳ ಅಧ್ಯಕ್ಷರುಗಳು, ಜನ ಪ್ರತಿನಿಧಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವಾಹಣಾ ಅಧಿಕಾರಿಗಳು, ವಿವಿದ ಸಂಘ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಲ್ಲಿದ್ದಾರೆ.
ಕಾರ್ಯಕ್ರಮದಲ್ಲಿ ಕಸ್ತೂರಬಾ ಬಾಲಿಕ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಎಸ್.ಹೆಚ್. ರವಿಕುಮಾರ್‌ರವರು ಸಂವಿಧಾನದ ಅರಿವು ಮತ್ತು ಜಾಗೃತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಕೆ.ಎನ್.ರವರು ಸಂವಿಧಾನದ ಆಶಯಗಳು ಮತ್ತು ಮೂಲಭೂತ ಹಕ್ಕುಗಳ ಮಹತ್ವ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.
ಈ ಸಂದರ್ಭದಲ್ಲಿ ಬೆಳಗ್ಗೆ 10.00ಕ್ಕೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಅಲ್ಲಮ ಪ್ರಭು ಸ್ವಾತಂತ್ರ ಉದ್ಯಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗಣ್ಯರಿಂದ 10*6 ಅಡಿ ಅಳತೆಯ ಸಂವಿಧಾನ ಪೀಠಿಕೆ ಪ್ರತಿಷ್ಠಾಪನೆಗೆ ಶಂಕು ಸ್ಥಾಪನೆ ಸಮಾರಂಭ ಹಮ್ಮಿಕೊಳ್ಳಲಾಗಿದೆ
.