Breaking
Mon. Dec 23rd, 2024

ಸೋಮಸಮುದ್ರ: ನ.26 ರಂದು ವಿವಿಧ ನೂತನ ಕಟ್ಟಡ ಹಾಗೂ ಕಾಮಗಾರಿಗಳ ಉದ್ಘಾಟನೆ ಕಾರ್ಯಕ್ರಮ……!

ಬಳ್ಳಾರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕುರುಗೋಡು ತಾಲ್ಲೂಕು ಪಂಚಾಯತ್, ಸೋಮಸಮುದ್ರ ಗ್ರಾಮ ಪಂಚಾಯಿತ್ ಕಾರ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನ.26 ರಂದು ಸಂಜೆ 05 ಗಂಟೆಗೆ ಕುರುಗೋಡು ತಾಲ್ಲೂಕಿನ ಸೋಮಸಮುದ್ರ ಗ್ರಾಮ ಪಂಚಾಯತ್ ಆವರಣದಲ್ಲಿ ವಿವಿಧ ಕಟ್ಟಡ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸ್ವಸಹಾಯ ಸಂಘಗಳ ಭವನ, ಆರೋಗ್ಯ ಕುಟುಂಬ ಕಲ್ಯಾಣ ಸ್ವಾಸ್ಥö್ಯ ಆಸ್ಪತ್ರೆ, ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ಅನಾವರಣ ಸೇರಿದಂತೆ ಸೋಮುಸಮುದ್ರ ಗ್ರಾಮದ ವಿವಿಧ ನೂತನ ಕಾಮಗಾರಿಗಳ ಉದ್ಘಾಟನೆ ನೆರವೇರಲಿದೆ.

ವಸತಿ, ವಕ್ಘ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವರು ಮತ್ತು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಝಡ್.ಜಮೀರ್ ಅಹ್ಮದ್ ಖಾನ್ ಉದ್ಘಾಟನೆ ಮಾಡುವರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಹಾಗೂ ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಅವರು ಅಧ್ಯಕ್ಷತೆ ವಹಿಸುವರು.

ಸಂಸದರಾದ ಈ.ತುಕಾರಾಂ, ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ನಾರಾ ಭರತ್ ರೆಡ್ಡಿ, ಬಿ.ಎಂ.ನಾಗರಾಜ್, ಈ.ಅನ್ನಪೂರ್ಣ, ವಿಧಾನಪರಿಷತ್ ಶಾಸಕರಾದ ವೈ.ಎಂ.ಸತೀಶ್, ಚಂದ್ರಶೇಖರ ಪಾಟೀಲ, ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡ್ರಿಗಿ ನಾಗರಾಜ, ಜಿಪಂ ಮಾಜಿ ಸದಸ್ಯ ಎ.ಮಾನಯ್ಯ, ಕುರುಗೋಡು ಪುರಸಭೆ ಅಧ್ಯಕ್ಷ ಹೆಚ್.ಶೇಖಣ್ಣ, ಸೋಮಸಮುದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಾರದ ಪವಾಡಿ ರಮೇಶ, ಉಪಾಧ್ಯಕ್ಷ ವಿ.ಗಂಗಾಧರ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ, ಸೋಮಸಮುದ್ರ ಗ್ರಾಮ ಪಂಚಾಯಿತಿ ಅಭಿವೃಧ್ಧಿ ಅಧಿಕಾರಿ ಎನ್.ಸಿದ್ದಲಿಂಗಪ್ಪ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಅಧಿಕಾರಿ ವರ್ಗದವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Related Post

Leave a Reply

Your email address will not be published. Required fields are marked *