Breaking
Mon. Dec 23rd, 2024

ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ.ವಿಜಯ್….!

ಚಿತ್ರದುರ್ಗ :  ಜೀವನದಲ್ಲಿ ಸಾಧಿಸುವ ಛಲ, ಕಠಿಣ ಪರಿಶ್ರಮ ಇದ್ದರೆ ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು. 

      ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ, ಜಿಲ್ಲಾ ಪಂಚಾಯತ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವಕಲಚೇತನರ ದಿನಾಚರಣೆ ಅಂಗವಾಗಿ ನಡೆಯುತ್ತಿರುವ ವಿಕಲಚೇತನರ ಕ್ರೀಡಾಕೂಟದ ಸಾಂಸ್ಕೃತಿಕ ಸ್ಪರ್ಧೆಗಳು ಮಾತನಾಡಿದರು.

ಅಂಗವಿಕಲರು ತಮ್ಮ ದೈಹಿಕ ನ್ಯೂನತೆಗಳ ಬಗ್ಗೆ ಕೀಳರಿಮೆ ಬಿಡಬೇಕು. ವಿಕಲಚೇತನರು ಪ್ಯಾರಾ ಒಲಂಪಿಕ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿಯೂ ಉತ್ತಮ ಸಾಧನೆ ತೋರಿದ್ದಾರೆ. ಅಂಗವಿಕಲತೆ ಎಂಬ ಕೀಳರಿಮೆಯನ್ನು ಮನಸ್ಸಿನಿಂದ ಬಿಟ್ಟು, ತಮ್ಮ ಗುರಿಯೊಂದಿಗೆ ಕ್ರಿಯಾಯೋಜನೆ ರೂಪಿಸಿಕೊಂಡು ಕಠಿಣ ಪರಿಶ್ರಮಪಟ್ಟರೆ ಸಾಧನೆ ಮಾಡುವುದು ಕಷ್ಟಕರವೇನಲ್ಲ ಎಂದು ಹೇಳಿದರು.

 ಅಂಗವಿಕಲತೆ ಎಂಬ ಕೀಳರಿಮೆ ಬಿಟ್ಟು, ಸಾಧನೆ ಕಡೆ ಗಮನಹರಿಸಿ, ಸಮಾಜದಲ್ಲಿ ಸ್ವಾವಲಂಬನೆಯಿಂದ ಬದುಕುವ ಆಧುನಿಕ ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳಲು ಉತ್ತಮ ಹಾಗೂ ಗೌರವಯುತ ಜೀವನ ಸಾಗಿಸಬೇಕು ಎಂದು ಸಲಹೆ ಸೂಚನೆ.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈ.ಶಾಲಿ ಮಾತನಾಡಿ, ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಈ ಬಾರಿ ಒಂದು ವಾರ ವಿಕಲಚೇತನರ ಸಪ್ತಾಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಕಲಚೇತನರಿಗಾಗಿ ಕ್ರೀಡಾ ಸಾಂಸ್ಕøತಿಕ ಸ್ಪರ್ಧೆಗಳು, ಕಾನೂನು ಸೇವಾ ಪ್ರಾಧಿಕಾರದೊಂದಿಗೆ ಕಾನೂನು ಅರಿವು-ನೆರವು ಕಾರ್ಯಕ್ರಮ, ಶಾಲಾ-ಕಾಲೇಜುಗಳಲ್ಲಿ 2016ರ ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಗಮನಸೆಳೆದ ವಿಕಲಚೇತನರ ಕ್ರೀಡಾಕೂಟ:

 ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ನಡೆದ ವಿಕಲಚೇತನರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಗಮನ ಸೆಳೆದವು.

ಕ್ರೀಡಾ ಸ್ಪರ್ಧೆಯಲ್ಲಿ 18 ವರ್ಷ ಮೇಲ್ಪಟ್ಟ ಶ್ರವಣ ದೋಷ ಮತ್ತು ದೈಹಿಕ ವಿಕಲಚೇತರಿಗೆ 100ಮೀ ಓಟ, ಗುಂಡು ತರಬೇತಿ, ಜಾವಲಿನ್ ಥ್ರೋ ಬುದ್ದಿಮಾಂದ್ಯರಿಗೆ 100ಮೀ ಓಟ, ಬಕೆಟ್‌ನಲ್ಲಿ ರಿಂಗ್, ಮ್ಯೂಜಿಕಲ್ ಚೇರ್ ಹಾಗೂ ಅಂಧ ವಿಶೇಷಚೇತನರಿಗೆ ಮಡಿಕೆ ಹೊಡೆಯುವುದು, ಕೇನ್ ರೇಸ್ ಸ್ಪರ್ಧೆಗಳು ನಡೆದವು.

ಸಾಂಸ್ಕøತಿಕ ಸ್ಪರ್ಧೆಯಲ್ಲಿ 18 ವರ್ಷ ಮೇಲ್ಪಟ್ಟ ದೃಷ್ಟಿದೋಷ, ದೈಹಿಕ ಮತ್ತು ಬೌದ್ಧಿಕ ವಿಕಲತೆ ವಿಕಲಚೇತನರಿಗೆ ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ ಸ್ಪರ್ಧೆಗಳು ನಡೆದವು. ಕ್ರೀಡಾ ಮತ್ತು ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ವಿಕಲಚೇತನರು ಸಂತೋಷ ಹಾಗೂ ಉತ್ಸಾಹದಿಂದ ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ವಿಜಯ್ ಕುಮಾರ್, ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಇ.ಎಂ.ವೀಣಾ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೋಮಶೇಖರ್, ದೈಹಿಕ ಶಿಕ್ಷಣ ಶಿಕ್ಷಕ ಮಲ್ಲೇಶ್ ಸೇರಿದಂತೆ ಎಂ.ಆರ್.ಡಬ್ಲ್ಯೂ, ವಿ.ಆರ್.ಡಬ್ಲ್ಯೂ, . ಆರ್.ಡಬ್ಲ್ಯೂಗಳು ಹಾಗೂ ವಿಕಲಚೇತನರು ಇಬ್ಬರು.

Related Post

Leave a Reply

Your email address will not be published. Required fields are marked *