ಚಿತ್ರದುರ್ಗ : ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಸಂವಿಧಾನ ದಿನ ಆಚರಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಂವಿಧಾನ ಪ್ರತಿಜ್ಞಾವಿಧಿ ಬೋಧಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ಸಿ.ಎನ್.ಗಾಯತ್ರಿ, ಮುಖ್ಯ ಲೆಕ್ಕಾಧಿಕಾರಿ ಮಧು, ಸಹಾಯಕ ಕಾರ್ಯದರ್ಶಿ ರವಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತ ಬಸನಗೌಡ ಪಾಟೀಲ್ ಮತ್ತು ಜಿಲ್ಲಾಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಸಿಬ್ಬಂದಿ ಇದ್ದರು.