ಚಿತ್ರದುರ್ಗ : ಕಾಲೇಜು ಹಾಗೂ ತಾಂತ್ರಿಕ ಶಿಕ್ಷಣ ಇಲಾಖೆ, ಚಿತ್ರದುರ್ಗ ಸರ್ಕಾರಿ ವಿಜ್ಞಾನ ಕಾಲೇಜು ವತಿಯಿಂದ ಇದೇ ನ.27ರಂದು ಬೆಳಿಗ್ಗೆ 10.30ಕ್ಕೆ ಸರ್ಕಾರಿ ವಿಜ್ಞಾನ ಕಾಲೇಜು ಆವರಣದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಸಾಂಸ್ಕøತಿಕ, ಕ್ರೀಡಾ, ಎನ್‍ಎಸ್‍ಎಸ್, ಎನ್‍ಸಿಸಿ, ರೆಡ್‍ಕ್ರಾಸ್, ರೋವರ್ಸ್, ರೇಂಜರ್ಸ್ ಮತ್ತು ಇತರೆ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಗೋವಿಂದ ಎಂ ಕಾರಜೋಳ, ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಭಾಗವಹಿಸುವರು. ನಿವೃತ್ತ ಪ್ರಾಂಶುಪಾಲ ಹಾಗೂ ಇತಿಹಾಸ ಸಂಶೋಧಕ ಡಾ.ಬಿ.ರಾಜಶೇಖರಪ್ಪ ವಿಶೇಷ ಉಪನ್ಯಾಸ ನೀಡುವರು. ಸರ್ಕಾರಿ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಪ್ರೊ.ಸಿದ್ರಾಮ ಚನಗೊಂಡ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.