ಶಿವಮೊಗ್ಗ .
ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಕಸಬಾ, ಶಿವಮೊಗ್ಗ ತಾಲ್ಲೂಕು ಕೋಟೆ ರಸ್ತೆಯಲ್ಲಿರುವ ವಸತಿ ಶಾಲೆಯಲ್ಲಿ ಆರೋಗ್ಯ ಮೇಲ್ವಿಚಾರಣೆಗಾಗಿ ಸ್ಟಾಫ್ ನರ್ಸ್ ಸಿಬ್ಬಂದಿಯನ್ನು ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಸ್ಪಾಫ್ ನರ್ಸ್ ಹುದ್ದೆಗೆ ಜಿಎನ್‌ಎಂ ಅಥವಾ ಬಿಎಸ್ಸಿ ನರ್ಸಿಂಗ್ ಪದವಿಯನ್ನು ಪಡೆದ ಮಹಿಳಾ ಅಭ್ಯರ್ಥಿಗಳು ಡಿ.5 ರೊಳಗೆ ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ, ಕಸಬಾ ಕೋಟೆ ರಸ್ತೆ ಶಿವಮೊಗ್ಗ ಇಲ್ಲಿಗೆ ಅರ್ಜಿ ಸಲ್ಲಿಸಬಹುದಾಗಿದ್ದು, ಹೊರ ಸಂಪನ್ಮೂಲ ಏಜೆನ್ಸಿ ಮೂಲಕ ಇಎಸ್‌ಐ, ಪಿಎಫ್ ಕಟಾಯಿಸಿ ಮಾಸಿಕ ರೂ.13499/- ವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ 9880238509 ಗೆ ಸಂಪರ್ಕಿಸಬಹುದಾಗಿದೆ ಎಂದು ಡಾ.ಬಿ.ಆರ್ ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.