ಚಿತ್ರದುರ್ಗ : ಜಿಲ್ಲೆಯಲ್ಲಿ ಶೇ.10ರಷ್ಟು ಜನನ-ಮರಣ ನೋಂದಣಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಮಟ್ಟದ ನಾಗರಿಕ ನೋಂದಣಿ ಪದ್ಧತಿಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಯೋಜನೆ, ಕಾರ್ಯಕ್ರಮ ರೂಪಿಸಲು ದತ್ತಾಂಶಗಳು ಬಹಳ ಮುಖ್ಯ. ನಿಖರವಾದ ಅಂಕ-ಅಂಶಗಳು ಇಲ್ಲದಿದ್ದರೆ ಯೋಜನೆ ರೂಪಿಸಲು ಕಷ್ಟ ಸಾಧ್ಯ. ಈ ಜನನ-ಮರಣ ಶೇ.100ರಷ್ಟು ನೋಂದಣಿಗಾಗಿ ವಿವಿಧ ಇಲಾಖೆಗಳ ನೆರವು ಅಗತ್ಯ, ಜಿಲ್ಲೆಯ ಎಲ್ಲಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತರು, ವೈದ್ಯಾಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್, ವಾಟರ್ ಮ್ಯಾನ್ ಗ್ರಾಮ ಪಂಚಾಯಿತಿ ಸದಸ್ಯರು ಜನ-ಮರಣ ನೋಂದಣಿ ಕಾರ್ಯದಲ್ಲಿ ಕಡ್ಡಾಯವಾಗಿ ಭಾಗವಹಿಸಿ ಶೇ. .100ರಷ್ಟು ಪ್ರಗತಿ ಸಾಧಿಸಬೇಕು ಎಂದು ಹೇಳಿದರು.
ಜನನ-ಮರಣ ನೋಂದಣಿಗೆ ಸಂಬಂಧಿಸಿದ ಸುತ್ತೋಲೆಗಳ ಕಡತ, ಪ್ರಮಾಣ ಪತ್ರ ವಿತರಣೆ, ವಿತರಣೆ ವಹಿ ಸಮರ್ಪಕವಾಗಿ ನಿರ್ವಹಿಸಬೇಕು ಹಾಗೂ ಇತರ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಇಲಾಖೆ, ಆರೋಗ್ಯ ಇಲಾಖೆ ಜನನ-ಮರಣ ನೋಂದಣಿ ಮತ್ತು ಉಪ ನೋಂದಣಿ ಘಟಕಗಳ ನಾಮಫಲಕಗಳನ್ನು ಅಳವಡಿಸಬೇಕು ಎಂದು ಹೇಳಿದರು.
ಪ್ರತಿ ತಿಂಗಳ ಸಭೆ ನಡೆಸಿ: ತಹಶೀಲ್ದಾರ್ಗಳ ಅಧ್ಯಕ್ಷತೆಯಲ್ಲಿ ನಡೆಯುವ ತಾಲ್ಲೂಕು ಮಟ್ಟದ ನಾಗರೀಕ ನೋಂದಣಿ ಪದ್ಧತಿಯ ಸಮನ್ವಯ ಸಮಿತಿ ಸಭೆಗಳನ್ನು ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಧಿಕಾರಿಗಳು ಸೂಚಿಸಿದರು.
2024 ಜನವರಿಯಿಂದ ಅಕ್ಟೋಬರ್ ವರೆಗೆ ಆರು ತಾಲ್ಲೂಕುಗಳಿಂದ ತಾಲ್ಲೂಕು ಮಟ್ಟದ 60 ನಾಗರಿಕ ನೋಂದಣಿ ಪದ್ಧತಿಯ ಸಮನ್ವಯ ಸಮಿತಿ ಸಭೆಗಳನ್ನು ನಡೆಸಬೇಕಾಗಿತ್ತು, ಇದರಲ್ಲಿ ಚಳ್ಳಕೆರೆ ತಾಲ್ಲೂಕಿನಲ್ಲಿ 02, ಚಿತ್ರದುರ್ಗ 05, ಹಿರಿಯೂರು 01, ಹೊಳಲ್ಕೆರೆ 06, ಹೊಸದುರ್ಗ 02 ಹಾಗೂ ಸಲ್ಲಿಸಿದ ಮೊಳಕಾಲ್ಮುರು ತಾಲ್ಲೂಕಿನಲ್ಲಿ 04 ಸಭೆ ಸೇರಿ ಒಟ್ಟು 20 ಸಭೆಗಳನ್ನು ನಡೆಸಲಾಯಿತು, ಅಧಿಕಾರಿ ರವಿಕುಮಾರ್ ಸಭೆಗೆ ಮಾಹಿತಿ. ಇದಕ್ಕೆ ಸಂದರ್ಶಿಸಿದ ಜಿಲ್ಲಾಧಿಕಾರಿಗಳು, ತಾಲ್ಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ನಡೆಸಿದ ಅಧಿಕಾರಿಗಳಿಗೆ ನೋಟಿಸ್ ನೀಡಿ ಎಂದು ತಾಕೀತು ಮಾಡಿದರು.
ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರ ನೋಂದಣಿ ಕಡ್ಡಾಯ: ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳಲ್ಲಿ ಮರಣ ಸಂಭವಿಸಿದಾಗ ಮರಣ ಕಾರಣ ವೈದ್ಯಕೀಯ ಪ್ರಮಾಣ ಪತ್ರ ನಮೂನೆ 4ಎ ನಲ್ಲಿ ದಾಖಲಾಗಬೇಕು. ಇ-ಜನ್ಮ ತಂತ್ರಾಂಶದಲ್ಲಿ ಮರಣ ನೋಂದಣಿ ಮರಣದ ಕಾರಣ ವೈದ್ಯಕೀಯ ಪ್ರಮಾಣ ಪತ್ರವನ್ನು ಅಪ್ಲೋಡ್ ಮಾಡಬೇಕು ಎಂದು ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರವಿಕುಮಾರ್ ಪ್ರಕಟಿಸಿದರು.
ಕೊನೆಯ ಕ್ಷಣದವರೆಗೂ ಉಪಚರಿಸಿದ ವೈದ್ಯರು, ರೋಗಿಗೆ ಸಂಬಂಧಿಸಿದ ಮರಣದ ಕಾರಣವನ್ನು ನಮೂನೆ-4 ರ ಪ್ರಮಾಣ ಪತ್ರವನ್ನು ಭರ್ತಿ ಮಾಡಬೇಕು. ಪ್ರತಿ ತಿಂಗಳ ಮರಣ ವೈದ್ಯಕೀಯ ಪ್ರಮಾಣಪತ್ರವನ್ನು ಜನನ ಮರಣ ಮುಖ್ಯ ನೋಂದಣಾಧಿಕಾರಿಗೆ ಸಲ್ಲಿಸಬೇಕು. ಪ್ರತಿಯನ್ನು ಜಿಲ್ಲಾ ಸಂಗ್ರಹಣಾಧಿಕಾರಿಗಳಿಗೆ ಸಲ್ಲಿಸುವಂತೆ ತಿಳಿಸಿದ ಅವರು, ಯಾವುದೇ ಜನನ-ಮರಣ ನೋಂದಣಿ ಕೈಬಿಟ್ಟು ಹೋಗದಂತೆ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು.
ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಕುಮಾರಸ್ವಾಮಿ ಅಧಿಕಾರಿಗಳು ಇದ್ದ ರು .