ಬಳ್ಳಾರಿ,
ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನ.29 ರಂದು ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಏರ್ಪಡಿಸಲಾಗಿದೆ.
ಜೆಎಸ್‌ಡಬ್ಲೂö್ಯ ಸಿಮೆಂಟ್ ಕಂಪನಿ ಮತ್ತು ಆಕ್ಸಿಸ್ ಬ್ಯಾಂಕ್ ಇವರು ತಮ್ಮಲ್ಲಿನ ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳುವರು.
ಜೆಎಸ್‌ಡಬ್ಲೂö್ಯ ಸಿಮೆಂಟ್ ಕಂಪನಿ: ವಿದ್ಯಾರ್ಹತೆ ಡಿಪ್ಲೋಮಾ ಸಿವಿಲ್, ಸಿವಿಲ್ ಇಂಜಿನಿಯರಿAಗ್ ವಿದ್ಯಾರ್ಥಿಗಳು ಭಾಗವಹಿಸಬಹುದು.
ಆಕ್ಸಿಸ್ ಬ್ಯಾಂಕ್: ವಿದ್ಯಾರ್ಹತೆ ಪಿಯುಸಿ, ಬಿಎ, ಬಿ.ಕಾಂ, ಬಿಬಿಎ ಹಾಗೂ ಇತರೆ ಪದವೀಧರರು ಭಾಗವಹಿಸಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ. ನೇರ ಸಂದರ್ಶನದಲ್ಲಿ ಪುರುಷರಿಗೆ ಮಾತ್ರ ಅವಕಾಶ.
ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರಗಳೊಂದಿಗೆ ಹಳೇ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಅಂದು ನಡೆಯುವ ನೇರ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಮೊ.9742718891, 9663263086, 9900827768, 6360408094 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ತಿಳಿಸಿದ್ದಾರೆ.