Breaking
Mon. Dec 23rd, 2024

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೇಂಟ್ ಕೋರ್ಸ್ಗೆ ಅರ್ಜಿ ಆಹ್ವಾನ

ಶಿವಮೊಗ್ಗ ನವೆಂಬರ್. 30;

ವಿನೋಬನಗರ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ರಲ್ಲಿ 6 ತಿಂಗಳ ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿಗಾಗಿ ಪ್ರವೇಶವು ದಿ:01/01/2025ರಿಂದ ಪ್ರಾರಂಭವಾಗಲಿದ್ದು, ಎಸ್.ಎಸ್.ಎಲ್.ಸಿ / ಪಿ.ಯು.ಸಿ./ಪದವಿ ಮುಗಿಸಿದ ಸಹಕಾರ ಸಂಘ-ಸAಸ್ಥೆಗಳ ಸಿಬ್ಬಂದಿಗಳು, ಖಾಸಗಿ ಹಾಗೂ ಎಸ್.ಸಿ/ಎಸ್.ಟಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಕೆ.ಐ.ಸಿ.ಎಂ ಇಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಡಿ.20 ರೊಳಗಾಗಿ ಸಲ್ಲಿಸುವಂತೆ ಕೆ.ಐ.ಸಿ.ಎಂ. ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಸಂಸ್ಥೆಗಳ ಸಿಬ್ಬಂದಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ ಮಾಸಿಕ ರೂ. 500/- ಹಾಗೂ ಎಸ್.ಸಿ/ಎಸ್.ಟಿ. ಅಭ್ಯರ್ಥಿಗಳಿಗೆ ಮಾಸಿಕ ರೂ. 600/- ಗಳ ಶಿಷ್ಯವೇತನ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-248873/ 7022429440/ 7022441115 / 9845120371/ 7026246493 ಗಳನ್ನು ಸಂಪರ್ಕಿಸುವುದು.

Related Post

Leave a Reply

Your email address will not be published. Required fields are marked *