ಉಡುಪಿ : ಡ್ಯಾಂಗೆ ಸ್ನಾನ ಮಾಡುತ್ತಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳ್ವ ಕುಂದಾಪುರ ತಾಲೂಕಿನಲ್ಲಿ ನಡೆದಿದೆ.
ಮೃತ ಬಾಲಕರನ್ನು ಶ್ರೀಶಾ (13) ಮತ್ತು ಜಯಂತ್ (19) ಎಂದು ಗುರುತಿಸಲಾಗಿದೆ. ಡ್ಯಾಂಗ್‌ನಲ್ಲಿ ನಾಲ್ಕು ಹುಡುಗರು ಈಜುತ್ತಿದ್ದರು. ಶ್ರೀಶ್ ಮತ್ತು ಜಯಂತ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.