ಚಿತ್ರದುರ್ಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆ ಘಟಕ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಮಹಾರಾಜ ಮದಕರಿ ನಾಯಕ ಪ್ರಥಮ ದರ್ಜೆ ಕಾಲೇಜು ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇದೇ ಡಿಸೆಂಬರ್ 03ರಂಉ ಮಧ್ಯಾಹ್ನ 12ಕ್ಕೆ ನಗರದ ಮಹಾರಾಜ ಮದಕರಿ ನಾಯಕ ಪ್ರಥಮ ದರ್ಜೆ ಕಾಲೇಜಿನ ಶ್ರೀ ಗುರು ವಾಲ್ಮೀಕಿ ಮಹರ್ಷಿಗಳ ಸಭಾಂಗಣದಲ್ಲಿ “ ವಿಶ್ವ ಏಡ್ಸ್ ದಿನ” ಹಮ್ಮಿಕೊಳ್ಳಲಾಇದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಏಡ್ಸ್ ಮತ್ತು ಕ್ಷಯರೋಗ ನಿಯಂತ್ರಣ ಕಾರ್ಯಕ್ರಮ ಜಿಲ್ಲಾ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ.ಸಿ.ಓ.ಸುಧಾ ಪ್ರಾಸ್ತಾವಿಕ ನುಡಿಗಳನ್ನಾಡುವರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ಜಿಲ್ಲಾಸ್ಪತ್ರೆ ಚರ್ಮರೋಗ ತಜ್ಞ ಡಾ.ವಿಜಯಕುಮಾರ್ ಭಾಗವಹಿಸುವರು. ಮಹಾರಾಜ ಮದಕರಿ ನಾಯಕ ಕಾಲೇಜಿನ ಎನ್‍ಎಸ್‍ಎಸ್ ಸಂಚಾಲಕರಾದ ಪ್ರೊ.ಎನ್.ಟಿ.ಗಂಗಮ್ಮ, ಪ್ರೊ.ಎನ್.ಶ್ರೀನಿವಾಸ್, ಡಾ.ಧನಂಜಯ್, ಜಿಲ್ಲಾಸ್ಪತ್ರೆ ಎಆರ್‍ಟಿ ಕೇಂದ್ರ ವೈದ್ಯಾಧಿಕಾರಿ ಡಾ.ರೂಪಶ್ರೀ ಉಪಸ್ಥಿತರಿರುವರು. ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಡಿ.ಎಂ.ಅಭಿನವ್ ಹಾಗೂ ಮಹಾರಾಜ ಮದಕರಿ ನಾಯಕ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಿ.ಆರ್.ರಂಗಸ್ವಾಮಿ ಅವರಿಗೆ ಸನ್ಮಾನಿಸಲಾಗುವುದು ಎಂದು ಜಿಲ್ಲಾ ಏಡ್ಸ್ ಮತ್ತು ನಿಯಂತ್ರಣ ಮತ್ತು ತಡೆ ಘಟಕದ ಜಿಲ್ಲಾ ಕಾರ್ಯಕ್ರಮಾಧಿಕಾರಿಗಳು ತಿಳಿಸಿದ್ದಾರೆ.