Breaking
Mon. Dec 23rd, 2024

ಡಿ.07 ಮತ್ತು 08ರಂದು ಪಿಡಿಓ ನೇಮಕಾತಿ ಪರೀಕ್ಷೆ ಪೂರ್ವಸಿದ್ದತಾ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿಕೆ ಪರೀಕ್ಷಾ ಕೇಂದ್ರಗಳಲ್ಲಿ ತಪಾಸಣೆಗೆ ಹೆಚ್ಚುವರಿ ಪೊಲೀಸ್ ನೇಮಕ

ಚಿತ್ರದುರ್ಗ : ಡಿಸೆಂಬರ್ 07 ಮತ್ತು 08 ರಂದು ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿ(ಪಿಡಿಓ) ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ. ಜಿಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳ ತಪಾಸಣೆಗೆ ಅನುಕೂಲವಾಗುವಂತೆ ಹೆಚ್ಚುವರಿ ಪೊಲೀಸರನ್ನು ನೇಮಿಸಲು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆ ನೀಡಿದ್ದಾರೆ.

 ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಈ ಕುರಿತು ನಡೆದ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿದ್ದರು

ನೇಮಕಾತಿ ಪರೀಕ್ಷೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ಅಡಗಿದೆ. ಯಾವುದೇ ಗೊಂದಲ ಹಾಗೂ ಅಕ್ರಮಗಳಿಗೆ ಎಡೆ ಮಾಡಿಕೊಡದಂತೆ ಪರೀಕ್ಷಾ ಕಾರ್ಯ ನಡೆಸಬೇಕು. ಪರೀಕ್ಷಾ ಸಂಬಾಧ್ ಕೆಪಿಎಸ್‌ಸಿ ನೀಡಿರುವ ಮಾರ್ಗಸೂಚಿಗಳನ್ನು ತಪ್ಪದೇ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಾಕೀತು ಮಾಡಿದರು.

ಮೊಬೈಲ್, ಬ್ಲೂಟೂಟ್ ಮತ್ತು ಆಧುನಿಕ ಸಂವಹನ ಉಪಕರಣಗಳನ್ನು ಬಳಸಿ ಪರೀಕ್ಷಾ ಅಕ್ರಮ ಮಾಡುವುದನ್ನು ತಡೆಯಲು ಅಭ್ಯರ್ಥಿಗಳನ್ನು ಸಂಪೂರ್ಣವಾಗಿ ತಪಾಸಣೆ ನಡೆಸಬೇಕು. ಕೆ.ಪಿ.ಎಸ್.ಸಿ ವತಿಯಿಂದ ತಪಾಸಣೆಗೆ ಒಳಪಡುವ ವ್ಯಕ್ತಿಗಳನ್ನು ನಿಯೋಜನೆ ಮಾಡುವುದಾಗಿದೆ. ಆದಾಗ್ಯೂ ಎಲ್ಲಾ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ತಪಾಸಣೆಗಾಗಿ ಪ್ರತ್ಯೇಕ ತಂಡ ರಚಿಸಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಮಹಿಳಾ ಅಭ್ಯರ್ಥಿಗಳ ತಪಾಸಣೆಗೆ ಅನುಕೂಲವಾಗುವಂತೆ ಹೆಚ್ಚುವರಿ ಮಹಿಳಾ ಪೊಲೀಸರನ್ನು ತಪ್ಪದೇ ನೇಮಿಸಬೇಕು. ತಡೆಯಲು ಪರೀಕ್ಷಾ ಕೇಂದ್ರಗಳಲ್ಲಿ ಜಾಮರ್ ಹಾಗೂ ಪರೀಕ್ಷಾ ನಡೆಯುವ ಕೊಠಡಿಗಳಲ್ಲಿ ಸಿ.ಸಿ.ಟಿ.ವಿ ಅಕ್ರಮ ಅಳವಡಿಸಲು ಸೂಚನೆ ನೀಡಲಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಜಾಮರ್, ಸಿ.ಸಿ.ಟಿ.ವಿ ಕ್ಯಾಮೆರಾಗಳು ಸುಸ್ಥಿತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ನಿರ್ದೇಶಿಸಿದರು.

 ಪರೀಕ್ಷಾ ಕೇಂದ್ರದ ಸುತ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಇದಕ್ಕೆ ಪೂರಕವಾಗಿ ಪರೀಕ್ಷಾ ಕೇಂದ್ರದ ಸುತ್ತ 200 ಮೀಟರ್ ಅಗತ್ಯ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಖಜಾನೆ ಅಧಿಕಾರಿ, ಮಾರ್ಗಗಳು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಹಾಗೂ ಕೊಠಡಿ ಮೇಲ್ವಿಚಾರಕು ಪ್ರಶ್ನೆಪತ್ರಿಕೆ ಹಾಗೂ ಓಎಂಆರ್ ನಿರ್ವಹಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಪರೀಕ್ಷಾ ಕೇಂದ್ರದಲ್ಲಿ ಹೆಲ್ತ್ ಸ್ಕಿçÃನಿಂಗ್ ಕೌಂಟರ್ ಸ್ಥಾಪಿಸಿ, ಆರೋಗ್ಯ ತಪಾಸಣೆಗಾಗಿ ಆರೋಗ್ಯ ಸಹಾಯಕರನ್ನು ನಿಯೋಜಿಸಬೇಕು. ಪರೀಕ್ಷಾ ಕಾರ್ಯ ಮುಗಿದ ನಂತರ ಉತ್ತರ ಪತ್ರಿಕೆಗಳ ಬಂಡಲ್‌ಗಳನ್ನು ಅಂಚೆ ಕಚೇರಿಯ ಮೂಲಕ ಆಯೋಗಕ್ಕೆ ಸುರಕ್ಷಿತವಾಗಿ ತಲುಪಿಸಬೇಕು. ಪರೀಕ್ಷೆ ಶನಿವಾರ ಹಾಗೂ ಭಾನುವಾರ ನಡೆಯುವುದರಿಂದ ಎಲ್ಲಾ ಪರೀಕ್ಷಾ ಕೇಂದ್ರಗಳ ಬಳಿ ಇರುವ ಅಂಚೆ ಕೆಚೇರಿಯಗಳನ್ನು ತೆರೆದು, ಬಂಡಲ್‌ಗಳನ್ನು ಸ್ವೀಕರಿಸಬೇಕು ಎಂದು ಜಿಲ್ಲಾಧಿಕಾರಿ ಅಂಚೆ ಇಲಾಖೆ ಅಧಿಕಾರಿಗಳು ಸೂಚಿಸಿದರು.

40 ಪರೀಕ್ಷಾ ಕೇಂದ್ರ : 14614 ಅಭ್ಯರ್ಥಿಗಳು

ಜಿಲ್ಲೆಯ ಚಿತ್ರದುರ್ಗ ಹಾಗೂ ಚಳ್ಳಕೆರೆ ನಗರದ 40 ಕೇಂದ್ರಗಳಲ್ಲಿ ಪಿಡಿಓ ನೇಮಕಾತಿ ಪರೀಕ್ಷೆ ನಡೆಯಲಿದ್ದು, ಒಟ್ಟು 14614 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಡಿಸೆಂಬರ್ 7 ರಂದು ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಕನ್ನಡ ಭಾಷಾ ಪರೀಕ್ಷೆ ನಂತರ. ಡಿ.8 ರಂದು ಬೆಳಿಗ್ಗೆ 10 ಗಂಟೆಯವರೆಗೆ 11:30 ರವರೆಗೆ-1ರ ಸಾಮಾನ್ಯ ಜ್ಞಾನ ಹಾಗೂ ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಸಾಮಾನ್ಯ ಪತ್ರಿಕೆ-2ರ ಸಾಮಾನ್ಯ ಕನ್ನಡ, ಇಂಗ್ಲಿಷ್, ಕಂಪ್ಯೂಟರ್ ಜ್ಞಾನ ವಿಷಯಗಳ ಪರೀಕ್ಷೆ. ಮಾರ್ಗಾಧಿಕಾರಿಗಳು, ಸೂಕ್ಷ್ಮ ವೀಕ್ಷಕರನ್ನು ಪರೀಕ್ಷಾ ಕೇಂದ್ರಗಳಿಗೆ ನೇಮಿಸಲಾಗಿದೆ. ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಜುನಾಥ ಸಭೆಯಲ್ಲಿ ಪರೀಕ್ಷೆಗಳ ಮುಖ್ಯಸ್ಥರಿಗೆ ಎಲ್ಲಾ ನಿರ್ದೇಶನಗಳನ್ನು ನೀಡಲಾಗುತ್ತದೆ.

ಚಳ್ಳಕೆರೆ ತಹಶೀಲ್ದಾರ್ ರೆಹಮಾನ್ ಪಾಷ, ಡಿವೈಎಸ್‌ಪಿ ದಿನಕರ್, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು, ಜಿಲ್ಲಾ ಖಜನಾಧಿಕಾರಿ, ಅಂಚೆ ಇಲಾಖೆ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Related Post

Leave a Reply

Your email address will not be published. Required fields are marked *