Breaking
Mon. Dec 23rd, 2024

ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳ ನೇಮಕ: ಅರ್ಜಿ ಆಹ್ವಾನ

ಬಳ್ಳಾರಿ : ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಿಸಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆ 11 ಗ್ರಾಮ – ಒನ್ ಕೇಂದ್ರಗಳಿಗೆ ಫ್ರಾಂಚೈಸಿಯನ್ನು ನೇಮಿಸಲು ಉದ್ದೇಶಿಸಲಾಗಿದೆ. ಬಳ್ಳಾರಿ ತಾಲ್ಲೂಕಿನ ಶಂಕರಬಾಡೆ, ಕಂಪ್ಲಿ ತಾಲ್ಲೂಕಿನ ದೇವಸಮುದ್ರ, ಕುರುಗೋಡು ತಾಲ್ಲೂಕಿನ ಬಾದನಹಟ್ಟಿ ಮತ್ತು ಸಂಡೂರು ತಾಲ್ಲೂಕಿನ ಅಂತಾಪುರ, ಬನ್ನಿಹಟ್ಟಿ, ಭುಜಂಗನಗರ, ಸುಶೀಲನಗರ, ಯಶವಂತನಗರ ಗ್ರಾಮ ಪಂಚಾಯತಿ.

ಖಾಲಿಯಿರುವ ಗ್ರಾಮ ಕೇಂದ್ರಗಳ ವಿವರ ಮತ್ತು ಅರ್ಜಿ ಸಲ್ಲಿಸಲು https://kal-mys.gramaone.karnataka.gov.in/ ಗೆ ಭೇಟಿ ನೀಡಬಹುದು. ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಫ್ರಾಂಚೈಸಿಯನ್ನು ಬಯಸುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಸಲು ಕೊನೆಯ ದಿನ ಡಿಸೆಂಬರ್ 15 ಆಗಿರುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದರು

 

Related Post

Leave a Reply

Your email address will not be published. Required fields are marked *