Breaking
Mon. Dec 23rd, 2024

ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ಅಭಿಯಾನ: ಡಿ.06 ರಂದು ಉದ್ಘಾಟನಾ ಸಮಾರಂಭ

ಬಳ್ಳಾರಿ, : ಜಿಲ್ಲಾ ಸಾರ್ವಜನಿಕ ಕಾರ್ಯಕ್ರಮ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕ್ಷಯರೋಗ ನಿರ್ಮೂಲನಾ ಇವರ ಸಂಯುಕ್ತಾಶ್ರಯದಲ್ಲಿ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ-100 ದಿನಗಳ ಅಭಿಯಾನ ಅಂಗವಾಗಿ ಡಿ.07 ರಂದು ಮಧ್ಯಾಹ್ನ 1.30 ಗಂಟೆಗೆ ಜಿಪಂ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಕ್ಷಯಮುಕ್ತ ಗ್ರಾಮ ಪಂಚಾಯತ್, ನಿಕ್ಷಯ ಮಿತ್ರದಡಿ ದಾನಿಗಳಿಗೆ ಸನ್ಮಾನ ನಿಕ್ಷಯ್ ವಾಹನ ಚಾಲನಾ ಉದ್ಘಾಟನಾ ಸಮಾರಂಭವನ್ನು ಆಯೋಜಿಸಲಾಗಿದೆ.

ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್.ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ಈ.ಅನ್ನ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಪ್ರಮುಖ ಅತಿಥಿಗಳಾಗಿ ಭಾಗವಹಿಸಿದ್ದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ, ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಕೆ.ವಿ.ತ್ರಿಲೋಕಚಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತ ಶಿವಕುಮಾರ್.ಕೆ.ಬಿ., ರಾಷ್ಟಿçÃಯ ಆರೋಗ್ಯ ಅಭಿಯಾನದ ಅಭಿಯಾನದ ನಿರ್ದೇಶಕ ಡಾ.ನವೀನ್ ಭಟ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶಕರಾದ ಡಾ.ತ್ರಿವೇಣಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್.ಎನ್ ಹೊಸಮನೆ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲ ರಮೇಶಬಾಬು, ಬಿಮ್ಸ್ ನಿರ್ದೇಶಕ ಡಾ.ಟಿ.ಗಂಗಾಧರ ಗೌಡ, ಜಿಲ್ಲಾ ಶಾಸ್ತಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ವಿ.ಇಂದ್ರಾಣಿ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ .

 

Related Post

Leave a Reply

Your email address will not be published. Required fields are marked *