ಚಿತ್ರದುರ್ಗ : ಜಿಲ್ಲಾ ಗೃಹರಕ್ಷಕ ದಳದ ವತಿಯಿಂದ ಇದೇ ಡಿಸೆಂಬರ್ 09 ರಂದು ಸಂಜೆ 4 ರಂದು ನಗರದ ಜಿಲ್ಲಾ ಸಶಸ್ತ್ರ ಮೀಸಲು ಪಡೆ (ಡಿಎಆರ್) ಮೈದಾನದಲ್ಲಿ “ಅಖಿಲ ಭಾರತ ಗೃಹರಕ್ಷಕ ದಳ ದಿನಾಚರಣೆ-2024” ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಜೆ.ಕುಮಾರಸ್ವಾಮಿ ಉದ್ಘಾಟನೆ ನೆರವೇರಿಸಿದರು. ಗೃಹರಕ್ಷಕ ದಳ ಜಿಲ್ಲಾ ಸಮಾದೇಷ್ಟರಾದ ಸಿ.ಕೆ.ಸಂಧ್ಯಾ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ನೀಡಲಾಗಿದೆ.