ಚಳ್ಳಕೆರೆ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ವತಿಯಿಂದ ಚಳ್ಳಕೆರೆಯ ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ರಾಜ್ಯ ಪ್ರಶಸ್ತಿ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಿದೆ.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಶ್ರೀಮತಿ ಜೈತುಂಬಿ, ಉಪಾಧ್ಯಕ್ಷರಾದ ಶ್ರೀಮತಿ ಸುಜಾತ ಪ್ರಹ್ಲಾದ್, ನಗರಸಭೆ ಸದಸ್ಯರಾದ ರಮೇಶ್ ಗೌಡ, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಶಶಿಕಲಾ ಸುರೇಶ್ ಬಾಬು, ಕರ್ನಾಟಕ ಪತ್ರಕರ್ತರ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ್, ತಾಲ್ಲೂಕು ಅಧ್ಯಕ್ಷರಾದ ಜಾಲಿ ಮಂಜು, ಪತ್ರಕರ್ತರಾದ ಕೋರ್ಲಕುಂಟೆ ತಿಪ್ಪೇಸ್ವಾಮಿ, ಪ್ರಶಸ್ತಿ ಪುರಸ್ಕೃತರಾದ ಡಾ. ಆರ್. ಎ.ದಯಾನಂದ್ ಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಕೆ.ಎಸ್.ಸುರೇಶ್, ಕಿಲಾರಿ ಜೋಗಯ್ಯ, ಹನುಮಂತಪ್ಪ ಪೂಜಾರ್, ಸಿ.ಟಿ.ವೀರೇಶ್, ಸುರೇಶ್ ಬೆಳಗೆರೆ, ಶ್ರೀಮತಿ ಬಿ.ಎಂ. ಭಾಗ್ಯಮ್ಮ, ಗೊಂಚಿಗಾರ್ ಬೋರಯ್ಯ, ಸಿ.ವೈ.ಗಂಗಾಧರ, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.