ಚಿತ್ರದುರ್ಗ : ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಶನಿವಾರ ಜಿಲ್ಲೆಯಲ್ಲಿ ಜರುಗಿದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ನಡೆದ ಕನ್ನಡ ಭಾಷಾ ಪರೀಕ್ಷೆಗೆ 5122 ಅಭ್ಯರ್ಥಿಗಳು ಗೈರಾಗಿದ್ದಾರೆ.
ಕನ್ನಡ ಭಾಷಾ ಪರೀಕ್ಷೆಯು ಚಿತ್ರದುರ್ಗ ನಗರದ 28 ಕೇಂದ್ರಗಳಲ್ಲಿ ಹಾಗೂ ಚಳ್ಳಕೆರೆ ನಗರದ 01 ಕೇಂದ್ರ ಸೇರಿದಂತೆ ಒಟ್ಟು 29 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಜಿಲ್ಲೆಯಲ್ಲಿ ಒಟ್ಟು 10632 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದರಲ್ಲಿ 5510 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 5122 ಅಭ್ಯರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಪರೀಕ್ಷಾ ಕೇಂದ್ರಗಳಿಗೆ ಎಸಿ ಭೇಟಿ: ಉಪವಿಭಾಗಾಧಿಕಾರಿ ಎಂ.ಕಾರ್ತಿಕ್ ಅವರು ಚಿತ್ರದುರ್ಗ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.