ಚಿತ್ರದುರ್ಗ : ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆ ಮತ್ತು ಕರ್ನಾಟಕ ರಾಜ್ಯ ರೇಷ್ಮೆ ಇಲಾಖೆ ವತಿಯಿಂದ ಇದೇ ಡಿ.20 ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಎಸ್.ಜಿ ಕಲ್ಯಾಣ ಮಂಟಪದಲ್ಲಿ ರೈಷ್ಮೆ ಕೃಷಿ-ಐಸಿರಿಗೆ ದಾರಿ ಎಂಬ ವಿಷಯದೊಂದಿಗೆ “ರೇಷ್ಮೆ ಕೃಷಿ ಮೇಳ”ವನ್ನು ನಡೆಸಲಾಯಿತು.
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು. ಪಶು ಸಂಗೋಪನೆ ಮತ್ತು ರೇಷ್ಮೆ ಕೃಷಿ ಸಚಿವ ಕೆ.ವೆಂಕಟೇಶ್ ರೇಷ್ಮೆ ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸಂಸದ ಗೋವಿಂದ ಎಂ.ಕಾರಜೋಳ ಭಾಗವಹಿಸಿದವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು.
ಗೌರವಾನ್ವಿತ ಅತಿಥಿಗಳಾಗಿ ಆಹಾರ ಮತ್ತು ನಾಗರೀಕ ಸರಬರಾಜ ನಿಗಮದ ಅಧ್ಯಕ್ಷರು ಹಾಗೂ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ, ಕೆ.ಎಸ್.ಎಸ್.ಐಡಿಸಿ ಅಧ್ಯಕ್ಷರು ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ನಗರಸಭೆ ಅಧ್ಯಕ್ಷೆ ಸುಮಿತಾ ರಾಘವೇಂದ್ರ ಭಾಗವಹಿಸುವವರು.
ರೇಷ್ಮೆ ಕೃಷಿ ಅಭಿವೃದ್ಧಿ ಆಯುಕ್ತರು ಮತ್ತು ನಿರ್ದೇಶಕ ಎಂ.ಬಿ.ರಾಜೇಶ್ ಗೌಡ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿ.ಪಂ.ಸಿಇಒ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಂಜಿತ್ ಕುಮಾರ್ ಬಂಡಾರು, ಕೇಂದ್ರ ರೇಷ್ಮೆ ಮಂಡಳಿ ಸದಸ್ಯ ಕಾರ್ಯದರ್ಶಿ ಪಿ.ಶಿವರಾಜ್ ಕುಮಾರ್, ತಾಂತ್ರಿಕ ನಿರ್ದೇಶಕ ಡಾ.ಎಸ್. .ಮಂತಿರಮೂರ್ತಿ, ಅಮೃತ ಸಾವಯವಗೊಬ್ಬರ ಕಂಪನಿಯ ನಾಗರಾಜ್ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಸದಸ್ಯರು, ರೇಷ್ಮೆ ಬೆಳೆಗಾರರ ಸಂಘಗಳ ಸದಸ್ಯರು, ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆಗಳು ಮತ್ತು ಸಿಬ್ಬಂದಿ, ಮೈಸೂರು ಜಂಟಿ ನಿರ್ದೇಶಕರು, ರೇಷ್ಮೆ ಉಪ ನಿರ್ದೇಶಕರು, ಸಹಾಯಕ ನಿರ್ದೇಶಕರು, ರಾಜ್ಯ ರೇಷ್ಮೆ ಇಲಾಖೆ ವಿಸ್ತರಣಾಧಿಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ನಿರ್ದೇಶಕರು .