Breaking
Mon. Dec 23rd, 2024

ಅಪರಾಧ ತಡೆ ಮಾಸಾಚರಣೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಚಾಲನೆ ಅಪರಾಧ ತಡೆಗೆ ಅರಿವು ಅಗತ್ಯ…..!

ಚಿತ್ರದುರ್ಗ : ಅಪರಾಧ ತಡೆ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹೇಳಿದ್ದಾರೆ.

  ನಗರದ ಜಿಲ್ಲಾಧಿಕಾರಿಗಳ ಕಚೇರಿ ವೃತ್ತದ ಬಳಿ ಶುಕ್ರವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಜಾಗೃತಿ ಮೂಡಿಸುವ ಟ್ಯಾಬ್ಲೊಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ.

ಅಪರಾಧಗಳ ಸಂಖ್ಯೆ ಇಳಿಕೆಗೆ ಪೊಲೀಸ್ ಇಲಾಖೆ ಹಲವು ರೀತಿಯಲ್ಲಿ ಶ್ರಮಿಸುತ್ತಿದೆ. ಇದರ ಜೊತೆಗೆ ಅಪರಾಧ ತಡೆಗೆ ಸಾರ್ವಜನಿಕರಲ್ಲಿಯೂ ಅರಿವು ಹಾಗೂ ಸಹಕಾರ ಅಗತ್ಯವಾಗಿದೆ. ಇಂತಹ ಕಾರ್ಯಕ್ರಮಗಳು ನಡೆಯುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗಲು ಸಾಧ್ಯ. ಈ ರೀತಿಯ ಪ್ರಕರಣಗಳು ಕಂಡುಬಂದಲ್ಲಿ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಅಥವಾ 1930 ಗೆ ಸಂಪರ್ಕಿಸಬಹುದು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಮಾತನಾಡಿ, ಪ್ರತಿ ವರ್ಷ ಡಿಸೆಂಬರ್ ಮಾಹೆಯಲ್ಲಿ ಅಪರಾಧ ತಡೆ ಮಾಸಾಚರಣೆ ರಾಜ್ಯಾದ್ಯಂತ ಆಚರಿಸುವುದಿಲ್ಲ. ಅದರಂತೆ ಜಿಲ್ಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಅಪರಾಧ ತಡೆ ಮಾಸಾಚರಣೆ ಅಂಗವಾಗಿ ಟ್ರಾಫಿಕ್ ಸಂಬಂಧಿತ, ಡ್ರಗ್ಸ್ ಮತ್ತು ಸೈಬರ್ ಅಪರಾಧ ಸೇರಿದಂತೆ ಇತರ ಅಪರಾಧಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಚಿತ್ರದುರ್ಗ, ಚೂರುಳ್ಳಕೆರೆ ಹಾಗೂ ಹಿರಿಯ ಉಪವಿಭಾಗಗಳ ಪ್ರತಿಯೊಂದು ಪೊಲೀಸ್ ಠಾಣಾ ರಚನೆಯ ಮೂರು ಸ್ತಬ್ದ ಚಿತ್ರ ವಾಹನಗಳಿಗೆ ಜಾಗೃತಿ ಮೂಡಿಸಲಾಯಿತು. ಇದರ ಜೊತೆಗೆ ಪೊಲೀಸ್ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅಪರಾಧ ತಡೆ ಕುರಿತು ಜಾಗೃತಿ ಮೂಡಿಸಲು ಎಂದು ಮಾಹಿತಿ ನೀಡಿದರು.  

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಚಿತ್ರದುರ್ಗ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪಿ.ಕೆ.ದಿನಕರ್ ಸೇರಿದಂತೆ ಪೊಲೀಸ್ ಅಧಿಕಾರಿಗಳು .

Related Post

Leave a Reply

Your email address will not be published. Required fields are marked *