ದೆಹಲಿ, ಡಿಸೆಂಬರ್ 15: ಅಂತಾರಾಷ್ಟ್ರೀಯ ಖ್ಯಾತಿಯ ತಬಲಾ ಪಟು ಜಾಕೀರ್ ಹುಸೇನ್ (73) ವಿಧಿವಶರಾಗಿದ್ದಾರೆ. ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಜಾಕಿರ್ ಹುಸೇನ್ ಭಾನುವಾರ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಕೊನೆಯುಸಿರೆಳೆದಿದ್ದಾರೆ.
ಜಾಕಿರ್ ಹುಸೇನ್ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಭಾರತದ ಅತ್ಯಂತ ಪ್ರಸಿದ್ಧ ಶಾಸ್ತ್ರೀಯ ಸಂಗೀತಗಾರರಲ್ಲಿ ಒಬ್ಬರಾದ ಜಾಕಿರ್ ಹುಸೇನ್ ಅವರು ಪ್ರಸಿದ್ಧ ತಬಲಾ ವಾದಕ ಅಲ್ಲಾ ರಖಾರಾ ಅವರ ಹಿರಿಯ ಮಗ. ಭಾರತವೂ ಸೇರಿದಂತೆ ಜಗತ್ತಿನಾದ್ಯಂತ ತಬಲಾವನ್ನು ಪ್ರಸಿದ್ಧಗೊಳಿಸಿದರು. ಅವರು ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಸಂದರ್ಶಕ ಮತ್ತು ಹಲವಾರು ಹಾಲಿವುಡ್ ಚಲನಚಿತ್ರಗಳಲ್ಲಿ ನಟಿಸಿದ್ದಾರೆ.
ಪ್ರಶಸ್ತಿಗಳು
ಜಾಕಿರ್ ಹುಸೇನ್ ತಮ್ಮ ವೃತ್ತಿಜೀವನದಲ್ಲಿ ಮೂರು ಗ್ರಾಮಿ ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಅವರು 66 ನೇ ಗ್ರ್ಯಾಮಿ ಪ್ರಶಸ್ತಿಗಳಲ್ಲಿ ಮೂರು ಪ್ರಶಸ್ತಿಗಳನ್ನು ಗೆದ್ದರು. ಅವರು 1988 ರಲ್ಲಿ ಪದ್ಮಶ್ರೀ, 2002 ರಲ್ಲಿ ಪದ್ಮಭೂಷಣ ಮತ್ತು 2023 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗಳನ್ನು ಪಡೆದರು.