ಶಿವಮೊಗ್ಗ , : ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಡಿ. 23 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ.
ಪ್ರಾಣಿ ಆಹಾರ ಶಾಸ್ತ್ರ, ಪಶುವೈದ್ಯಕೀಯ ವಿಭಾಗ ಮತ್ತು ವಿಷಶಾಸ್ತ್ರ ವಿಭಾಗ, ಜಾನುವಾರು ಉತ್ಪನ್ನಗಳ ತಾಂತ್ರಿಕತೆ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ, ಪಶುವೈದ್ಯಕೀಯ ವಿಭಾಗ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಾಸ್ತ್ರ ಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ಪಶು ವೈದ್ಯಕೀಯ ವಿಭಾಗ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳ ಸಂದರ್ಶನದಲ್ಲಿ ಭಾಗವಹಿಸಬಹುದು.
ನೇರ ಸಂದರ್ಶನವು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ಡಿ.23 ರಂದು ಬೆಳಿಗ್ಗೆ 11 ಗಂಟೆಯಿಂದ ನಂತರ. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್‌ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700/- ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್‌ಇಟಿ)ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ವೇತನ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08182-200872 ಹಾಗೂ ವಿಶ್ವವಿದ್ಯಾಲಯದ ಜಾಲತಾಣ www.kvafsu.edu.in ಅನ್ನು ಸಂಪರ್ಕಿಸಲು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ದಿನಾಂಕ .