ಬಳ್ಳಾರಿ : ಪ್ರವಾಸೋದ್ಯಮ ಇಲಾಖೆ ವತಿಯಿಂದ ಎಸ್.ಸಿ.ಎಸ್.ಪಿ ಹಾಗೂ ಟಿ.ಎಸ್.ಪಿ ಯೋಜನೆ ಅಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರಾದ ಪ್ರಭುಲಿಂಗ.ಎಸ್ ತಳಕೇರಿ ಅವರು ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕಮಲಾಪುರದ ಲೋಟಸ್ ಮಹಲ್ ಬಳಿಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿ ಡಿ.28ರೊಳಗಾಗಿ ಇದೇ ಕಚೇರಿಗೆ ಸಲ್ಲಿಸಬೇಕು.
ತರಬೇತಿ ವಿವರ ಹಾಗೂ ವಿದ್ಯಾರ್ಹತೆ:
ಅಭ್ಯರ್ಥಿಯ ವಯಸ್ಸು ಕನಿಷ್ಠ 20 ರಿಂದ 45 ವಷÀðದೊಳಗಿರಬೇಕು.
ಆಹಾರ ಮತ್ತು ಪಾನೀಯ ಸೇವೆಯ ಉಸ್ತುವಾರಿ (ಫುಡ್ ಅಂಡ್ ಬೆವರೇಜ್ ಸರ್ವೀಸ್ ಸ್ಟೇವರ್ಡ್): ತರಬೇತಿಯ ಕಾಲಾವಧಿ 04 ತಿಂಗಳು ಹಾಗೂ ಹತ್ತನೇ ತರಗತಿ ಉತ್ತೀರ್ಣರಾಗಿರಬೇಕು.
ಕೊಠಡಿ ಪರಿಚಾರಕ (ರೂಮ್ ಅಟೆಂಡAಟ್): ತರಬೇತಿಯ ಕಾಲಾವಧಿ 04 ತಿಂಗಳು ಹಾಗೂ ಐದನೇ ತರಗತಿ ಉತ್ತೀರ್ಣರಾಗಿರಬೇಕು.
ಕಚೇರಿ ಮುಂಭಾಗದ ಸಹವರ್ತಿ (ಫ್ರಂಟ್ ಆಫೀಸ್ ಅಸೋಸಿಯೇಟ್): ತರಬೇತಿಯ ಕಾಲಾವಧಿ 04 ತಿಂಗಳು ಹಾಗೂ ಹನ್ನೆರಡನೇ ತರಗತಿ ಉತ್ತೀರ್ಣರಾಗಿರಬೇಕು.
ಬಹು ತಿನಿಸು ಕುಕ್ (ಮಲ್ಟಿ ಕ್ಯೂಸೈನ್ ಕುಕ್): ತರಬೇತಿಯ ಕಾಲಾವಧಿ 05 ತಿಂಗಳು ಹಾಗೂ ಎಂಟನೇ ತರಗತಿ ಉತ್ತೀರ್ಣರಾಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಕಮಲಾಪುರ ಗ್ರಾಮದ ಲೋಟಸ್ ಮಹಲ್ ಬಳಿಯ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂ:08394-295640ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.