ಚಿತ್ರದುರ್ಗ : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಮಾರ್ಚ್-2028 ರ ಅಂತ್ಯಕ್ಕೆ ಅನುದಾನ ಲಭ್ಯವಾಗುವಂತೆ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖಮಂತ್ರಿ ಡಿ.ಕೆ.ಶಿವಕುಮಾರ್.
ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ಕೇಳಿದ ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯ ಪ್ರಗತಿಯ ಕುರಿತು ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದೆ.
ಭದ್ರಾ ಮೇಲ್ದಂಡೆ ಯೋಜನೆ ಮಧ್ಯ ಕರ್ನಾಟಕದ ಬರಪೀಡಿತ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ಜಿಲ್ಲೆಯಲ್ಲಿ 2,25,515 ಹೆಕ್ಟೇರ್ (5,57,022) ಭೂ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಪದ್ಧತಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ 367 ಕೆರೆಗಳಿಗೆ ಅವುಗಳ ಸಾಮಾಥ್ರ್ಯದ ಶೇ.50ರಷ್ಟು ನೀರನ್ನು ತುಂಬಿಸಲು ಉದ್ದೇಶಿಸಿ ರೂಪಿಸಲಾಗಿದೆ. ಈ ಯೋಜನೆಗೆ 29.90 ಟಿಎಂಸಿ ನೀರನ್ನು (ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಲು 21.90 ಟಿಎಂಸಿ, ಕೆರೆ ತುಂಬಿಸಲು 6 ಟಿಎಂಸಿ, ವಾಣಿ ವಿಲಾಸ ಸಾಗರಕ್ಕೆ 2 ಟಿಎಂಸಿ) ಹಂಚಿಕೆ ಮಾಡಲಾಗಿದೆ. ಈ ಯೋಜನೆ ರೂ.21,473.67 ಕೋಟಿ ಮೊತ್ತದ ಸಮಗ್ರ ಪುನರ್ ಪರಿಷ್ಕøತ ಯೋಜನೆ 2020ರ ಡಿಸೆಂಬರ್ 16ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗಳಿಗೆ ಅವಶ್ಯವಿರುವ ಜಮೀನಿನ ಭೂಸ್ವಾಧೀನದ ಪ್ರಕ್ರಿಯೆ ಚುರುಕುಗೊಳಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ.
ಕೇಂದ್ರ ಸರ್ಕಾರದಿಂದ 2023-24ನೇ ಸಾಲಿನ ಅಯವ್ಯಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿಗಳ ಅನುದಾನವನ್ನು ಘೋಷಿಸಲಾಗುವುದು. ಭದ್ರಾದಂಡೆ ಯೋಜನೆ ರಾಷ್ಟ್ರೀಯ ಯೋಜನೆಯನ್ನಾಗಿ ಪ್ರಕಟಿಸುವ ಪ್ರಕ್ರಿಯೆ ವಿಳಂಬವಾಗುತ್ತಿರುವ ಉದ್ದೇಶ, ಯೋಜನೆ ಅತೀ ಶೀಘ್ರವಾಗಿ ಪೂರ್ಣಗೊಳಿಸುವ ಮೂಲಕ ರೂ.5,300 ಕೋಟಿಗಳ ಧನ ಸಹಾಯವನ್ನು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ-ವೇಗವರ್ಧಿತ ನೀರಾವರಿ ಪ್ರಯೋಜನ ಕಾರ್ಯಕ್ರಮ ಯೋಜನೆ/ರಾಷ್ಟ್ರೀಯ ಯೋಜನೆ ಅಡಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ, ಅನುಮೋದನೆ ನಿರೀಕ್ಷಿಸಲಾಗಿದೆ.
ಆರ್ಥಿಕ ಪ್ರಗತಿ: ಭದ್ರ ಮೇಲ್ದಂಡೆ ಯೋಜನೆಗಾಗಿ 2024-25ನೇ ಸಾಲಿನಲ್ಲಿ ರೂ.1430 ಕೋಟಿ ಅನುದಾನ ಹಂಚಿಕೆ, 2024ರ ಅಕ್ಟೋಬರ್ ಅಂತ್ಯಕ್ಕೆ ಒಟ್ಟಾರೆ ಸಂಚಿತ ರೂ.10,115.13 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದೆ.
ರಾಷ್ಟ್ರೀಯ ಯೋಜನೆಯನ್ನು ಘೋಷಿಸಲು ಕೇಂದ್ರಕ್ಕೆ ಶಿಫಾರಸ್ಸು: ಭದ್ರಾ ಮೇಲ್ದಂಡೆ ಯೋಜನೆ: ರಾಷ್ಟ್ರೀಯ ಯೋಜನೆಯನ್ನು ಪ್ರಕಟಿಸಲು ಕೇಂದ್ರ ಸಚಿವ ಸಂಪುಟ ಸಭೆಗೆ ಅನುಮೋದನೆಗಾಗಿ ಶಿಫಾರಸ್ಸು ಮಾಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯು ತಾಂತ್ರಿಕವಾಗಿ ಮತ್ತು ಆರ್ಥಿಕವಾಗಿ ಕಾರ್ಯಸಾಧ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ತಾಂತ್ರಿಕ ಸಲಹಾ ಸಮಿತಿಯು ತೀರ್ಪಿತ್ತಿದೆ. ಕೇಂದ್ರದ ಇನ್‌ವೆಸ್ಟ್‌ಮೆಂಟ್ ಕ್ಲಿಯರೆನ್ಸ್ ಸಮಿತಿಯು ರೂ.16,125.48 ಕೋಟಿಗಳ ಯೋಜನಾ ಮೊತ್ತಕ್ಕೆ ಸ್ಥಿರೀಕರಿಸಿ ಅನುಮೋದನೆ ನೀಡಿದೆ. 2022 ರ ಫೆ.15 ರ ಕೇಂದ್ರದ ಹೈ ವರ್ಡ್ ಸ್ಟ್ರೀಂಗ್ ಸಮಿತಿಯ 14 ನೇ ಸಭೆಯು ಮಾಡಿದ ಶಿಫಾರಸ್ಸಿನಂತೆ ಕೇಂದ್ರ ಹಣಕಾಸು ಸಚಿವಾಲಯದ ಸಾರ್ವಜನಿಕ ಇನ್‌ವೆಸ್ಟ್‌ಮೆಂಟ್ ಬೋರ್ಡ್ ಮಂಡಳಿಯು ಪ್ರಸ್ತಾವನೆಯನ್ನು ಅಂಗೀಕರಿಸಿ ಭದ್ರಾ ಮೇಲ್ದಂಡೆ ಯೋಜನೆ ರಾಷ್ಟ್ರೀಯ ಯೋಜನೆಯಾಗಿ ಘೋಷಿಸಲು ಕೇಂದ್ರ ಸಚಿವ ಸಂಪುಟ ಸಭೆಯ ಅನುಮೋದನೆಯನ್ನು ಶಿಫಾರಸ್ಸು ಮಾಡಿದೆ.
ರಾಣಿಕೆರೆಗೆ ವೇದಾವತಿ ನದಿ ನೀರು: ಚಳ್ಳಕೆರೆ ತಾಲ್ಲೂಕಿನ ರಾಣಿಕೆರೆಗೆ ವೇದಾವತಿ ನದಿಯ ನೀರನ್ನು 39 ಕಿ.ಮೀ ನಾಲೆಯ ಮುಖಾಂತರ ಹರಿಸುವ ಯೋಜನೆ ಕರ್ನಾಟಕ ನೀರಾವರಿ ನಿಗಮದಿಂದ ವಿಶ್ವೇಶ್ವರಯ್ಯ ಜಲನಿಗಮಕ್ಕೆ ಅನುದಾನ ಸಹಿತ ಹಸ್ತಾಂತರಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ.
ಚಳ್ಳಕೆರೆ ಮತ್ತು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಗಳಿಗೆ ಸೇರಿರುವ 23,888 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ವ್ಯವಸ್ಥೆ ಕಲ್ಪಿಸುವ ಚಿತ್ರದುರ್ಗ ಶಾಖಾ ಕಾಲುವೆ (ಬ್ಲಾಕ್-9) ಮತ್ತು (ಬ್ಲಾಕ್-11) ಕಾಮಗಾರಿಗಳ ಅಂದಾಜು ಪಟ್ಟಿಗಳು ವಿಶ್ವೇಶ್ವರಯ್ಯ ಜಲನಿಗಮದ ಹಂತದಲ್ಲಿ ಪರಿಶೀಲನೆಯಲ್ಲಿದೆ. ಭದ್ರಾ ಮೇಲ್ದಂಡೆ ಯೋಜನೆಡಿಯಲ್ಲಿ ಸೂಕ್ಷ್ಮ ನೀರಾವರಿ ಕಲ್ಪಿಸುವ ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.